ಬೆಂಗಳೂರಿನಲ್ಲಿ ನಿಯಮ ಪಾಲಿಸದ ಪಿಜಿಗಳಿಗೆ ಜಿಬಿಎ ಬಿಗ್ ಶಾಕ್; 909 ಪಿಜಿಗಳಿಗೆ ನೋಟಿಸ್

Edited By:

Updated on: Oct 22, 2026 | 9:32 AM

ಬೆಂಗಳೂರಿನಲ್ಲಿ ಹೈಕೋರ್ಟ್ ಆದೇಶದಂತೆ ನಿಯಮ ಪಾಲಿಸದ ಪಿಜಿಗಳ ವಿರುದ್ಧ ಜಿಬಿಎ ಕ್ರಮಕ್ಕೆ ಮುಂದಾಗಿದೆ. ಬೆಂಗಳೂರು ದಕ್ಷಿಣ ವಿಭಾಗದ ವ್ಯಾಪ್ತಿಯಲ್ಲಿ 909 ಪಿಜಿಗಳಿಗೆ ನೋಟಿಸ್ ನೀಡಲಾಗಿದ್ದು, ಕೇವಲ 279 ಪಿಜಿಗಳು ಮಾತ್ರ ನಿಯಮ ಪಾಲಿಸಿರುವುದು ಗೊತ್ತಾಗಿದೆ. 600ಕ್ಕೂ ಹೆಚ್ಚು ಪಿಜಿಗಳಿಗೆ ಎರಡನೇ ಬಾರಿಗೆ ನೋಟಿಸ್ ನೀಡಲಾಗಿದ್ದು, ಉತ್ತರ ನೀಡದಿದ್ದರೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರು, ಅಕ್ಟೋಬರ್ 22: ಬೆಂಗಳೂರಿನಲ್ಲಿ ನಿಯಮಗಳನ್ನು ಪಾಲಿಸದ ಪೇಯಿಂಗ್ ಗೆಸ್ಟ್‌ (ಪಿಜಿ) ವಸತಿಗಳಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಬಿಸಿ ಮುಟ್ಟಿಸಿದೆ. ಹೈಕೋರ್ಟ್ ಆದೇಶದ ಅನ್ವಯ ನಿಯಮ ಪಾಲಿಸದ ಪಿಜಿಗಳ ವಿರುದ್ಧ ಕ್ರಮಕ್ಕೆ ಮುಂದಾಗಿರುವ ಜಿಬಿಎ, ಬೆಂಗಳೂರು ದಕ್ಷಿಣ ವಿಭಾಗದ ವ್ಯಾಪ್ತಿಯಲ್ಲಿ ಈಗಾಗಲೇ 909 ಪಿಜಿಗಳಿಗೆ ನೋಟಿಸ್ ನೀಡಿದೆ. ಈ ಪೈಕಿ ಕೇವಲ 279 ಪಿಜಿಗಳು ನಿಯಮಗಳನ್ನು ಪಾಲಿಸಿರುವ ಬಗ್ಗೆ ಸ್ಪಷ್ಟನೆ ನೀಡಿವೆ. ಇನ್ನು 600ಕ್ಕೂ ಹೆಚ್ಚು ಪಿಜಿಗಳು ಅಧಿಕೃತ ಪರವಾನಗಿ ಹೊಂದಿಲ್ಲ ಎಂಬುದು ಪರಿಶೀಲನೆಯ ವೇಳೆ ಪತ್ತೆಯಾಗಿದೆ. ಹೀಗಾಗಿ, ನಿಯಮ ಪಾಲಿಸದ ಪಿಜಿಗಳ ಮೇಲೆ ಜಿಬಿಎ ಅಧಿಕಾರಿಗಳು ನಿಗಾ ಇರಿಸಿದ್ದಾರೆ.

ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ವಿಭಾಗದ ವ್ಯಾಪ್ತಿಯಲ್ಲಿ ಪರಿಶೀಲನೆ ನಡೆಸಿ, ನಿಯಮ ಉಲ್ಲಂಘಿಸಿರುವ ಪಿಜಿಗಳಿಗೆ ನೋಟಿಸ್ ನೀಡಲಾಗಿದೆ. ಈಗಾಗಲೇ ನೋಟಿಸ್ ನೀಡಿದ್ದರೂ ಅಗತ್ಯ ನಿಯಮಗಳನ್ನು ಪಾಲಿಸದ ಮತ್ತು ಅಧಿಕೃತ ಪರವಾನಗಿ ಹೊಂದಿರದ 600ಕ್ಕೂ ಹೆಚ್ಚು ಪಿಜಿಗಳಿಗೆ ಜಿಬಿಎ ಎರಡನೇ ಬಾರಿಗೆ ನೋಟಿಸ್ ನೀಡಿದೆ. ಎರಡನೇ ನೋಟಿಸ್‌ಗೂ ಉತ್ತರ ನೀಡದಿದ್ದರೆ ಅಂತಹ ಪಿಜಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ. ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಪಿಜಿಗಳು ಹೈಕೋರ್ಟ್ ಆದೇಶದಂತೆ ನಿಯಮಗಳನ್ನು ಪಾಲಿಸುತ್ತಿವೆಯೇ ಎಂಬುದರ ಮೇಲೆ ಜಿಬಿಎ ನಿಗಾ ಇರಿಸಿದೆ. ನಿಯಮಗಳನ್ನು ಪಾಲಿಸದ ಪಿಜಿಗಳ ವಿರುದ್ಧ ಮುಂದಿನ ಹಂತದಲ್ಲಿ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್ ಕುಮಾರ್​ ಆರ್​.

ಅರುಣ್ ಕುಮಾರ್ ಆರ್. ಬೆಂಗಳೂರಿನ ಜ್ಞಾನಭಾರತಿ ವಿವಿಯಲ್ಲಿ ಸಮೂಹ ಸಂವಹನ ಹಾಗೂ ತಂತ್ರಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪ್ರಸ್ತುತ ಟಿವಿ9 ಕನ್ನಡದಲ್ಲಿ ಮೆಟ್ರೋ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಜಿಬಿಎ ಹಾಗೂ ನಗರದ ಅಭಿವೃದ್ಧಿ ಕ್ಷೇತ್ರದಲ್ಲಿ ಒಂದು ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವ ಇವರು, ಒಟ್ಟು 2 ವರ್ಷಗಳ ವರದಿಗಾರಿಕೆ ಅನುಭವದೊಂದಿಗೆ ಜನೋಪಯೋಗಿ ವಿಷಯಗಳ ಕುರಿತು ವರದಿ ಮಾಡುತ್ತಿದ್ದಾರೆ.

Read More