ಪಿಂಕ್​​ ಲೈನ್ ಮೆಟ್ರೋದಲ್ಲಿ ಡಿಕೆ ಶಿವಕುಮಾರ್​ ಪ್ರಯಾಣ: ಸಿಎಂ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ ಪ್ರಯಾಣಿಕರು

Edited By:

Updated on: Nov 14, 2026 | 4:25 PM

ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಸಂಚಾರ ಆರಂಭವಾಗಿದ್ದು, ಪ್ರಧಾನಿ ಮೋದಿ ಚಾಲನೆ ನೀಡಿದ್ದರು. ಇದೀಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಾಳೇನ ಅಗ್ರಹಾರದಿಂದ ಸದ್ದುಗುಂಟೆ ಪಾಳ್ಯದವರೆಗೆ ಪಿಂಕ್ ಲೈನ್ ಮೆಟ್ರೋದಲ್ಲಿ ಪ್ರಯಾಣಿಸಿದರು. ಈ ವೇಳೆ ಸಿಎಂ ಸಾಮಾನ್ಯ ಪ್ರಯಾಣಿಕರೊಂದಿಗೆ ಆತ್ಮೀಯವಾಗಿ ಬೆರೆತು ಸೆಲ್ಫಿ ತೆಗೆಸಿಕೊಂಡು, ಜನರ ಮೆಚ್ಚುಗೆಗೆ ಪಾತ್ರರಾದರು.

ಬೆಂಗಳೂರು, ನ.14: ಪ್ರಧಾನಿ ಮೋದಿ ಅವರು ನೆನ್ನೆ (ನ.13) ಬೆಂಗಳೂರು ಪಿಂಕ್ ಲೈನ್​​​​ ಮೆಟ್ರೋಗೆ ಚಾಲನೆ ನೀಡಿದರು. ಇಂದು ಬೆಳಿಗ್ಗೆಯಿಂದ ಪಿಂಕ್ ಲೈನ್​​ ಮೆಟ್ರೋ ಸಂಚಾರ ಆರಂಭವಾಗಿದೆ. ಸಚಿವ ಕೃಷ್ಣಭೈರೇಗೌಡ ಸೇರಿದಂತೆ ಅನೇಕ ಗಣ್ಯರು ಈ ಮೆಟ್ರೋದಲ್ಲಿ ಪ್ರಯಾಣ ಮಾಡಿದ್ದಾರೆ. ಇದೀಗ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​​​ ಅವರ ಕೂಡ ಲಿಂಕ್​​ ಲೈನ್​​ನಲ್ಲಿ ಪ್ರಯಾಣ ಬೆಳೆಸಿದ್ದಾರೆ. ಕಾಳೇನ ಅಗ್ರಹಾರ ಮೆಟ್ರೋ ನಿಲ್ದಾಣದಿಂದ ಸದ್ದುಗುಂಟೆ ಪಾಳ್ಯದವರೆಗೆ ಸಿಎಂ ಮೆಟ್ರೋ ರೈಲಿನಲ್ಲಿ ಪ್ರಯಾಣ ಮಾಡಿದ್ದಾರೆ,. ಇದರ ವೇಳೆ, ಸಹಪ್ರಯಾಣಿಕರೊಂದಿಗೆ ಆತ್ಮೀಯವಾಗಿ ಬೆರೆತರು. ಮಧ್ಯಾಹ್ನದ ವೇಳೆ ಕಾಳೇನ ಅಗ್ರಹಾರ ಮೆಟ್ರೋ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಾಮಾನ್ಯ ಪ್ರಯಾಣಿಕರಂತೆ ಮೆಟ್ರೋ ರೈಲು ಹತ್ತಿ ಸದ್ದುಗುಂಟೆ ಪಾಳ್ಯದವರೆಗೆ ಪ್ರಯಾಣಿಸಿದರು. ತಮ್ಮೊಂದಿಗೆ ಮುಖ್ಯಮಂತ್ರಿಗಳೇ ಮೆಟ್ರೋದಲ್ಲಿ ಪ್ರಯಾಣಿಸುತ್ತಿರುವುದನ್ನು ಕಂಡು ಪ್ರಯಾಣಿಕರು ಅಚ್ಚರಿ ಹಾಗೂ ಸಂತಸ ವ್ಯಕ್ತಪಡಿಸಿದರು. ಮೆಟ್ರೋ ಬೋಗಿಯಲ್ಲಿದ್ದ ಯುವಕರು, ಮಹಿಳೆಯರು ಸೇರಿದಂತೆ ಹಲವು ಪ್ರಯಾಣಿಕರು ಸಿಎಂ ಡಿ.ಕೆ. ಶಿವಕುಮಾರ್ ಅವರ ಬಳಿ ಬಂದು ಉಭಯಕುಶಲೋಪರಿ ವಿಚಾರಿಸಿದರು. ಅಲ್ಲದೆ, ಸಿಎಂ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು. ಮುಖ್ಯಮಂತ್ರಿಗಳು ಕೂಡ ನಗುಮೊಗದಿಂದಲೇ ಎಲ್ಲರಿಗೂ ಸೆಲ್ಫಿಗೆ ಪೋಸ್ ನೀಡಿ ಪ್ರಯಾಣಿಕರ ಮೆಚ್ಚುಗೆಗೆ ಪಾತ್ರರಾದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್ ಕುಮಾರ್​ ಆರ್​.

ಅರುಣ್ ಕುಮಾರ್ ಆರ್. ಬೆಂಗಳೂರಿನ ಜ್ಞಾನಭಾರತಿ ವಿವಿಯಲ್ಲಿ ಸಮೂಹ ಸಂವಹನ ಹಾಗೂ ತಂತ್ರಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪ್ರಸ್ತುತ ಟಿವಿ9 ಕನ್ನಡದಲ್ಲಿ ಮೆಟ್ರೋ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಜಿಬಿಎ ಹಾಗೂ ನಗರದ ಅಭಿವೃದ್ಧಿ ಕ್ಷೇತ್ರದಲ್ಲಿ ಒಂದು ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವ ಇವರು, ಒಟ್ಟು 2 ವರ್ಷಗಳ ವರದಿಗಾರಿಕೆ ಅನುಭವದೊಂದಿಗೆ ಜನೋಪಯೋಗಿ ವಿಷಯಗಳ ಕುರಿತು ವರದಿ ಮಾಡುತ್ತಿದ್ದಾರೆ.

Read More