ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ
ಬೆಂಗಳೂರಿನ ಕೆಎಸ್‍ಆರ್ ರೈಲು ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೂರು ಹೊಸ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದರು. ಬೆಂಗಳೂರು-ಬೆಳಗಾವಿ, ಅಮೃತಸರ-ಶ್ರೀಮಾತಾ ವೈಷ್ಣೋದೇವಿ ಕತ್ರಾ ಮತ್ತು ನಾಗಪುರ(ಅಜ್ನಿ)-ಪುಣೆ ಮಾರ್ಗಗಳಲ್ಲಿ ಈ ರೈಲುಗಳು ಸಂಚರಿಸಲಿವೆ. ರಾಜ್ಯಪಾಲರು, ಮುಖ್ಯಮಂತ್ರಿಗಳು ಮತ್ತು ಕೇಂದ್ರ ಸಚಿವರು ಈ ಸಮಾರಂಭದಲ್ಲಿ ಭಾಗಿಯಾಗಿದ್ದರು.
ಬೆಂಗಳೂರು, ಆಗಸ್ಟ್ 10: ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಮೂರು ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಹಸಿರು ನಿಶಾನೆ ತೋರಿಸಿದರು. ಬೆಂಗಳೂರು-ಬೆಳಗಾವಿ, ಅಮೃತಸರ-ಶ್ರೀಮಾತಾ ವೈಷ್ಣೋದೇವಿ ಕತ್ರಾ ಮತ್ತು ನಾಗಪುರ(ಅಜ್ನಿ)-ಪುಣೆ ವಂದೇ ಭಾರತ್ ರೈಲಿಗೆ ಮೋದಿ ಚಾಲನೆ ನೀಡಿದರು. ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವರಾದ ಅಶ್ವಿನಿ ವೈಷ್ಣವ್, ಸೋಮಣ್ಣ, ಸಂಸದ ಪಿ.ಸಿ.ಮೋಹನ್, ಸಚಿವ ದಿನೇಶ್ ಗುಂಡೂರಾವ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭಾಗಿ ಆಗಿದ್ದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Aug 10, 2025 12:09 PM
