ಈ ಭಾಗದ ಕನಸು ಸಾಕಾರಗೊಳಿಸಿದ ಪ್ರಧಾನಿ ಮೋದಿ: ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ
ಪ್ರಧಾನಿ ಮೋದಿ ಅವರು ಬೆಂಗಳೂರಿನ ರಾಗಿಗುಡ್ಡ ಮೆಟ್ರೋ ನಿಲ್ದಾಣದಲ್ಲಿ ಹೊಸ ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟಿಸಿದರು. ಆ ಮೂಲಕ ಸಿಲಿಕಾನ್ ಸಿಟಿ ಜನರ ಕನಸು ನನಸಾಗಿದೆ. ಆರ್.ವಿ. ರೋಡ್ ನಿಂದ ಬೊಮ್ಮಸಂದ್ರದವರೆಗೆ ವಿಸ್ತರಿಸಿರುವ ಈ ಮಾರ್ಗವು ಸುಮಾರು 19.15 ಕಿಲೋಮೀಟರ್ ಉದ್ದವಿದ್ದು, 16 ನಿಲ್ದಾಣಗಳನ್ನು ಹೊಂದಿದೆ.
ಬೆಂಗಳೂರು, ಆಗಸ್ಟ್ 10: ಸಿಲಿಕಾನ್ ಸಿಟಿ ಜನರ ಬಹುನಿರೀಕ್ಷಿತ ಮೆಟ್ರೋ ಹಳದಿ ಮಾರ್ಗಕ್ಕೆ (Yellow metro line) ಭಾನುವಾರ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಆರ್.ವಿ. ರೋಡ್ನಿಂದ ಬೊಮ್ಮಸಂದ್ರವರೆಗಿನ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಒಟ್ಟು 16 ನಿಲ್ದಾಣಗಳಿವೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವರಾದ ಮನೋಹರ್ ಲಾಲ್ ಖಟ್ಟರ್, ಶೋಭಾ ಕರಂದ್ಲಾಜೆ, ಸಂಸದರಾದ ಡಾ.ಸಿ.ಎನ್.ಮಂಜುನಾಥ್, ತೇಜಸ್ವಿ ಸೂರ್ಯ, ಸರ್ಕಾರದ ಸಿಎಸ್ ಶಾಲಿನಿ ರಜನೀಶ್ ಉಪಸ್ಥಿತರಿದ್ದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos

