ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಬೆಂಗಳೂರು ಪೊಲೀಸ್ ಕಮಿಷನರ್ ದಯಾನಂದ್ ಮನವಿ

| Updated By: ಸುಷ್ಮಾ ಚಕ್ರೆ

Updated on: Dec 31, 2024 | 10:18 PM

ಈಗಾಗಲೇ ಹೊಸ ವರ್ಷಾಚರಣೆಯ ಸಂಭ್ರಮ ಮುಗಿಲುಮುಟ್ಟಿದ್ದು, ಬೆಂಗಳೂರು ಹೊಸ ಕಳೆ ಹೊದ್ದು ಕುಳಿತಿದೆ. ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್​ ಸ್ಟ್ರೀಟ್​ನಲ್ಲಿ ನಡೆದ ಸಿದ್ಧತೆಗಳ ಬಗ್ಗೆ ಪರಿಶೀಲನೆಗೆ ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ್ ಆಗಮಿಸಿದ್ದಾರೆ.

ಬೆಂಗಳೂರು: ಹೊಸ ವರ್ಷಾಚರಣೆಗೆ ಬೆಂಗಳೂರು ಮಹಾನಗರ ಸಜ್ಜಾಗಿದೆ. ಬ್ರಿಗೇಡ್ ರಸ್ತೆ, ಎಂ.ಜಿ. ರಸ್ತೆ, ಚರ್ಚ್​ಸ್ಟ್ರೀಟ್​ನಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಪೊಲೀಸ್ ಅಧಿಕಾರಿಗಳು ಎಲ್ಲಾ ಕಡೆ ಗಮನ ಹರಿಸುತ್ತಿದ್ದಾರೆ. ಹೆಚ್ಚು ಜನ ಸೇರುವ ಪ್ರದೇಶದಲ್ಲಿ ಸಿಸಿ ಕ್ಯಾಮರಾ ಅಳವಡಿಸಿದ್ದೇವೆ. ಸಿಸಿ ಕ್ಯಾಮರಾ ಮೂಲಕ ನಿಗಾ ವಹಿಸುತ್ತಿದ್ದೇವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಹೇಳಿಕೆ ನೀಡಿದ್ದಾರೆ. ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆಗೆ ಅವಕಾಶವಿದೆ. ಸಂಭ್ರಮಾಚರಣೆಯ ಖುಷಿಯಲ್ಲಿ ಅಹಿತಕರ ಘಟನೆ ಸಂಭವಿಸದಂತೆ ಎಚ್ಚರ ವಹಿಸುವುದು ಕೂಡ ಅಗತ್ಯ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ