ಸಿನಿಮಾ ಪ್ರಚಾರದ ಹೆಸರಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಗಿಮಿಕ್ ಮಾಡೋರೇ ಹುಷಾರ್: ಪೊಲೀಸ್ ಆಯುಕ್ತರ ಖಡಕ್ ವಾರ್ನಿಂಗ್
ಸಿನಿಮಾ ಪ್ರಚಾರದ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಮಿತಿಮೀರಿದ ಗಿಮಿಕ್‌ಗಳ ವಿರುದ್ಧ ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಕಠಿಣ ಎಚ್ಚರಿಕೆ ನೀಡಿದ್ದಾರೆ. ಇತ್ತೀಚೆಗೆ ಪೆಟ್ರೋಲ್ ಕುಡಿಯುವಂತಹ ಹುಚ್ಚಾಟಗಳು ವರದಿಯಾಗಿವೆ. ಇಂತಹ ಚೀಪ್ ಗಿಮಿಕ್‌ಗಳು ಕಾನೂನುಬಾಹಿರವಾಗಿದ್ದು, ದುರ್ಬಳಕೆ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರು, ಫೆಬ್ರವರಿ 27: ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರು ಸಿನಿಮಾ ಪ್ರಚಾರದ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಮಿತಿಮೀರಿದ ಗಿಮಿಕ್‌ಗಳ ಬಗ್ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ, ಸಿನಿಮಾಗಳನ್ನು ಪ್ರಚಾರ ಮಾಡುವ ಸಲುವಾಗಿ ಕೆಲವು ವ್ಯಕ್ತಿಗಳು ಅಪಾಯಕಾರಿ ಮತ್ತು ಹುಚ್ಚಾಟದ ಕೃತ್ಯಗಳಲ್ಲಿ ತೊಡಗುತ್ತಿರುವ ಬಗ್ಗೆ ಅವರು ಪ್ರಸ್ತಾಪಿಸಿದ್ದಾರೆ. ಸಿನಿಮಾ ಪ್ರಚಾರದ ಒಂದು ನಿದರ್ಶನದಲ್ಲಿ, ಪೆಟ್ರೋಲ್ ಕುಡಿಯುವಂತಹ ಹುಚ್ಚಾಟದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡಲಾಗಿತ್ತು. ನಂತರ ಆ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಬೇಕಾಗಿ ಬಂದಿತ್ತು. ಇಂತದ ಚೀಪ್ ಗಿಮಿಕ್‌ಗಳು ಸಮಾಜಕ್ಕೆ ತಪ್ಪು ಸಂದೇಶ ರವಾನಿಸುತ್ತವೆ ಮತ್ತು ಇದು ಅನಗತ್ಯ ಹಾಗೂ ಅಪಾಯಕಾರಿ ಎಂದು ಕಮಿಷನರ್ ಹೇಳಿದ್ದಾರೆ.
ಸಾಮಾಜಿಕ ಮಾಧ್ಯಮಗಳ ದುರ್ಬಳಕೆ ಮಾಡುವವರ ವಿರುದ್ಧ ಕಟ್ಟುನಿಟ್ಟಾದ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸೀಮಂತ್ ಕುಮಾರ್ ಸಿಂಗ್ ಎಚ್ಚರಿಕೆಯನ್ನೂ ನೀಡಿದ್ದಾರೆ. ಕಾನೂನಿನ ಚೌಕಟ್ಟಿನಿಂದ ಹೊರತಾದ ಯಾವುದೇ ಪ್ರಚಾರ ಕಾರ್ಯಗಳಿಗೆ ಅವಕಾಶವಿಲ್ಲ. ಕಾನೂನು ಉಲ್ಲಂಘಿಸುವವರು ಶಿಕ್ಷೆಗೆ ಒಳಗಾಗಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.
ಕೆಪಿಎಸ್ಸಿ ನೇಮಕಾತಿ ಹಗರಣ: 1.5 ಕೋಟಿ, 22 ಲಕ್ಷದ ಚಿನ್ನಾಭರಣ ಜಪ್ತಿ
ಕೈ ಕೈ ಮಿಲಾಯಿಸುವ ಹಂತಕ್ಕೆ ಹೋದ ‘ಬಿಗ್ ಬಾಸ್ ಕನ್ನಡ 13’ ಶೋ ಸ್ಪರ್ಧಿಗಳು
ಕೊಪ್ಪಳದಲ್ಲಿ ಕೋತಿಯ ಚೇಷ್ಟೆಯಿಂದ ಪ್ರಾಣ ಕಳೆದುಕೊಂಡ 91 ವರ್ಷದ ಅಜ್ಜಿ!
ಗುಜರಾತ್ನಲ್ಲಿ ಭಕ್ತರಿಗೆ ಡಿಕ್ಕಿ ಹೊಡೆದ ಕಾರಿಗೆ ಬೆಂಕಿ ಹಚ್ಚಿದ ಜನರು!

