ಸಿನಿಮಾ ಪ್ರಚಾರದ ಹೆಸರಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಗಿಮಿಕ್ ಮಾಡೋರೇ ಹುಷಾರ್: ಪೊಲೀಸ್ ಆಯುಕ್ತರ ಖಡಕ್ ವಾರ್ನಿಂಗ್

Updated on: Feb 27, 2026 | 1:36 PM

ಸಿನಿಮಾ ಪ್ರಚಾರದ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಮಿತಿಮೀರಿದ ಗಿಮಿಕ್‌ಗಳ ವಿರುದ್ಧ ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಕಠಿಣ ಎಚ್ಚರಿಕೆ ನೀಡಿದ್ದಾರೆ. ಇತ್ತೀಚೆಗೆ ಪೆಟ್ರೋಲ್ ಕುಡಿಯುವಂತಹ ಹುಚ್ಚಾಟಗಳು ವರದಿಯಾಗಿವೆ. ಇಂತಹ ಚೀಪ್ ಗಿಮಿಕ್‌ಗಳು ಕಾನೂನುಬಾಹಿರವಾಗಿದ್ದು, ದುರ್ಬಳಕೆ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

ಬೆಂಗಳೂರು, ಫೆಬ್ರವರಿ 27: ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರು ಸಿನಿಮಾ ಪ್ರಚಾರದ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಮಿತಿಮೀರಿದ ಗಿಮಿಕ್‌ಗಳ ಬಗ್ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ, ಸಿನಿಮಾಗಳನ್ನು ಪ್ರಚಾರ ಮಾಡುವ ಸಲುವಾಗಿ ಕೆಲವು ವ್ಯಕ್ತಿಗಳು ಅಪಾಯಕಾರಿ ಮತ್ತು ಹುಚ್ಚಾಟದ ಕೃತ್ಯಗಳಲ್ಲಿ ತೊಡಗುತ್ತಿರುವ ಬಗ್ಗೆ ಅವರು ಪ್ರಸ್ತಾಪಿಸಿದ್ದಾರೆ. ಸಿನಿಮಾ ಪ್ರಚಾರದ ಒಂದು ನಿದರ್ಶನದಲ್ಲಿ, ಪೆಟ್ರೋಲ್ ಕುಡಿಯುವಂತಹ ಹುಚ್ಚಾಟದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡಲಾಗಿತ್ತು. ನಂತರ ಆ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಬೇಕಾಗಿ ಬಂದಿತ್ತು. ಇಂತದ ಚೀಪ್ ಗಿಮಿಕ್​ಗಳು ಸಮಾಜಕ್ಕೆ ತಪ್ಪು ಸಂದೇಶ ರವಾನಿಸುತ್ತವೆ ಮತ್ತು ಇದು ಅನಗತ್ಯ ಹಾಗೂ ಅಪಾಯಕಾರಿ ಎಂದು ಕಮಿಷನರ್ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮಗಳ ದುರ್ಬಳಕೆ ಮಾಡುವವರ ವಿರುದ್ಧ ಕಟ್ಟುನಿಟ್ಟಾದ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸೀಮಂತ್ ಕುಮಾರ್ ಸಿಂಗ್ ಎಚ್ಚರಿಕೆಯನ್ನೂ ನೀಡಿದ್ದಾರೆ. ಕಾನೂನಿನ ಚೌಕಟ್ಟಿನಿಂದ ಹೊರತಾದ ಯಾವುದೇ ಪ್ರಚಾರ ಕಾರ್ಯಗಳಿಗೆ ಅವಕಾಶವಿಲ್ಲ. ಕಾನೂನು ಉಲ್ಲಂಘಿಸುವವರು ಶಿಕ್ಷೆಗೆ ಒಳಗಾಗಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More