ಕಾಫಿ ಬಿಲ್ ಕೇಳಿದ್ದಕ್ಕೆ ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಮೂವರು ಕಾನ್ಸ್ಟೇಬಲ್ಸ್
ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದ ಆಲ್ಫಾ ಕ್ಯಾಂಟೀನ್‌ನಲ್ಲಿ ಕಾಫಿ ಬಿಲ್ ಕೇಳಿದ್ದಕ್ಕೆ ಮೂವರು ಪೊಲೀಸ್ ಕಾನ್‌ಸ್ಟೆಬಲ್‌ಗಳು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಗಂಗರಾಜು, ಬಾಳಪ್ಪ, ಕುಮಾರ್ ಎಂಬ ಕಾನ್‌ಸ್ಟೆಬಲ್‌ಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಹಿರಿಯ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.
ದೇವನಹಳ್ಳಿ, ಫೆಬ್ರವರಿ 12: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾಫಿ ಬಿಲ್ ಕೇಳಿದ್ದಕ್ಕೆ ಮೂವರು ಪೊಲೀಸ್ ಕಾನ್‌ಸ್ಟೆಬಲ್‌ಗಳು ಕ್ಯಾಂಟೀನ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ. ವಿಮಾನ ನಿಲ್ದಾಣದ ಆಲ್ಫಾ ಕ್ಯಾಂಟೀನ್‌ನಲ್ಲಿ ರಾತ್ರಿ ಬೀಟ್ ಡ್ಯೂಟಿಯಲ್ಲಿದ್ದ ಗಂಗರಾಜು, ಬಾಳಪ್ಪ ಮತ್ತು ಕುಮಾರ್ ಎಂಬ ಮೂವರು ಪೊಲೀಸರು ಕಾಫಿ ಕುಡಿದ ನಂತರ ಕ್ಯಾಂಟೀನ್ ಸಿಬ್ಬಂದಿ ಬಿಲ್ ಕೇಳಿದ್ದಾರೆ. ಇದರಿಂದ ಸಿಟ್ಟಿಗೆದ್ದ ಪೊಲೀಸರು, ನಾವು ಪೊಲೀಸರು, ನಮಗೆ ಬಿಲ್ ಏಕೆ ಎಂದು ದರ್ಪದಿಂದ ವರ್ತಿಸಿದ್ದಾರೆ. ಪೊಲೀಸರು ಕ್ಯಾಂಟೀನ್ ಸಿಬ್ಬಂದಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿದ್ದಾರೆ. ಸಿಸಿಟಿವಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್ಗೆ ಶಾಕ್ ಕೊಟ್ಟ ಲೋಕಾಯುಕ್ತ
