ಕಾಫಿ ಬಿಲ್​ ಕೇಳಿದ್ದಕ್ಕೆ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಮೂವರು ಕಾನ್ಸ್​ಟೇಬಲ್ಸ್

Edited By:

Updated on: Feb 12, 2026 | 4:53 PM

ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದ ಆಲ್ಫಾ ಕ್ಯಾಂಟೀನ್‌ನಲ್ಲಿ ಕಾಫಿ ಬಿಲ್ ಕೇಳಿದ್ದಕ್ಕೆ ಮೂವರು ಪೊಲೀಸ್ ಕಾನ್‌ಸ್ಟೆಬಲ್‌ಗಳು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಗಂಗರಾಜು, ಬಾಳಪ್ಪ, ಕುಮಾರ್ ಎಂಬ ಕಾನ್‌ಸ್ಟೆಬಲ್‌ಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಹಿರಿಯ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

ದೇವನಹಳ್ಳಿ, ಫೆಬ್ರವರಿ 12: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾಫಿ ಬಿಲ್ ಕೇಳಿದ್ದಕ್ಕೆ ಮೂವರು ಪೊಲೀಸ್ ಕಾನ್‌ಸ್ಟೆಬಲ್‌ಗಳು ಕ್ಯಾಂಟೀನ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ. ವಿಮಾನ ನಿಲ್ದಾಣದ ಆಲ್ಫಾ ಕ್ಯಾಂಟೀನ್‌ನಲ್ಲಿ ರಾತ್ರಿ ಬೀಟ್ ಡ್ಯೂಟಿಯಲ್ಲಿದ್ದ ಗಂಗರಾಜು, ಬಾಳಪ್ಪ ಮತ್ತು ಕುಮಾರ್ ಎಂಬ ಮೂವರು ಪೊಲೀಸರು ಕಾಫಿ ಕುಡಿದ ನಂತರ ಕ್ಯಾಂಟೀನ್ ಸಿಬ್ಬಂದಿ ಬಿಲ್ ಕೇಳಿದ್ದಾರೆ. ಇದರಿಂದ ಸಿಟ್ಟಿಗೆದ್ದ ಪೊಲೀಸರು, ನಾವು ಪೊಲೀಸರು, ನಮಗೆ ಬಿಲ್ ಏಕೆ ಎಂದು ದರ್ಪದಿಂದ ವರ್ತಿಸಿದ್ದಾರೆ. ಪೊಲೀಸರು ಕ್ಯಾಂಟೀನ್ ಸಿಬ್ಬಂದಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿದ್ದಾರೆ. ಸಿಸಿಟಿವಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More