ದರೋಡೆ ಕೇಸ್ ಬೇಧಿಸಿದ ಬೆಂಗಳೂರು ಪೊಲೀಸ್: ಅಧಿಕಾರಿಗಳಿಗೆ 5 ಲಕ್ಷ ರೂ ಬಹುಮಾನ ಘೋಷಣೆ
ಬೆಂಗಳೂರಿನಲ್ಲಿ ನಡೆದಿದ್ದ 7.11 ಕೋಟಿ ರೂ ಹಣ ದರೋಡೆ ಪ್ರಕರಣದಲ್ಲಿ 5.76 ಕೋಟಿ ರೂ. ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಮೂರು ತಿಂಗಳ ಕಾಲ ಯೋಜಿಸಿ, 15 ದಿನಗಳ ಕಾಲ ರೆಕ್ಕಿ ನಡೆಸಿದ್ದರು. ಸಿಎಂಎಸ್ ಕಂಪನಿಯ ಆರ್‌ಬಿಐ ಮಾರ್ಗಸೂಚಿ ಉಲ್ಲಂಘನೆ ಸಹ ಪತ್ತೆಯಾಗಿದೆ ಎಂದು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಬೆಂಗಳೂರು, ನವೆಂಬರ್ 22: ನಗರದಲ್ಲಿ ಹಾಡಹಗಲೇ ನಡೆದಿದ್ದ 7.11 ಕೋಟಿ ರೂ. ಹಣ ದರೋಡೆ ಪ್ರಕರಣವನ್ನು ಬೆಂಗಳೂರು ಪೊಲೀಸರು ಬೇಧಿಸಿದ್ದಾರೆ. ಹೀಗಾಗಿ ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತನಿಖೆಯಲ್ಲಿ ಭಾಗಿಯಾಗಿದ್ದ ಎಲ್ಲಾ ಅಧಿಕಾರಿಗಳಿಗೆ 5 ಲಕ್ಷ ರೂ. ಬಹುಮಾನ ಘೋಷಿಸಿದ್ದಾರೆ. ತನಿಖಾ ತಂಡದಲ್ಲಿದ್ದ ಅಧಿಕಾರಿಗಳಿಗೆ ಸೋಮವಾರ ಅಭಿನಂದನೆ ಸಲ್ಲಿಸ್ತೇವೆ ಎಂದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
