ದರೋಡೆ ಕೇಸ್​​ ಬೇಧಿಸಿದ ಬೆಂಗಳೂರು ಪೊಲೀಸ್​​: ಅಧಿಕಾರಿಗಳಿಗೆ 5 ಲಕ್ಷ ರೂ ಬಹುಮಾನ ಘೋಷಣೆ

Edited By:

Updated on: Nov 22, 2025 | 4:18 PM

ಬೆಂಗಳೂರಿನಲ್ಲಿ ನಡೆದಿದ್ದ 7.11 ಕೋಟಿ ರೂ ಹಣ ದರೋಡೆ ಪ್ರಕರಣದಲ್ಲಿ 5.76 ಕೋಟಿ ರೂ. ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಮೂರು ತಿಂಗಳ ಕಾಲ ಯೋಜಿಸಿ, 15 ದಿನಗಳ ಕಾಲ ರೆಕ್ಕಿ ನಡೆಸಿದ್ದರು. ಸಿಎಂಎಸ್ ಕಂಪನಿಯ ಆರ್‌ಬಿಐ ಮಾರ್ಗಸೂಚಿ ಉಲ್ಲಂಘನೆ ಸಹ ಪತ್ತೆಯಾಗಿದೆ ಎಂದು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಬೆಂಗಳೂರು, ನವೆಂಬರ್​ 22: ನಗರದಲ್ಲಿ ಹಾಡಹಗಲೇ ನಡೆದಿದ್ದ 7.11 ಕೋಟಿ ರೂ. ಹಣ ದರೋಡೆ ಪ್ರಕರಣವನ್ನು ಬೆಂಗಳೂರು ಪೊಲೀಸರು ಬೇಧಿಸಿದ್ದಾರೆ. ಹೀಗಾಗಿ ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್​​ ತನಿಖೆಯಲ್ಲಿ ಭಾಗಿಯಾಗಿದ್ದ ಎಲ್ಲಾ ಅಧಿಕಾರಿಗಳಿಗೆ 5 ಲಕ್ಷ ರೂ. ಬಹುಮಾನ ಘೋಷಿಸಿದ್ದಾರೆ. ತನಿಖಾ ತಂಡದಲ್ಲಿದ್ದ ಅಧಿಕಾರಿಗಳಿಗೆ ಸೋಮವಾರ ಅಭಿನಂದನೆ ಸಲ್ಲಿಸ್ತೇವೆ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. 

Loading...
Unable to load recommendations.
Follow Us
ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More