ಬೆಂಗಳೂರಿನಲ್ಲಿ ಕುರಿಗಳಿಗೂ ಪೊಲೀಸರಿಂದ ಟೈಟ್ ಸೆಕ್ಯೂರಿಟಿ!

Updated on: May 27, 2026 | 11:12 AM

ಬೆಂಗಳೂರಿನ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕುರಿಗಳನ್ನು ಕಾಯಲು ಪೊಲೀಸರನ್ನು ನಿಯೋಜಿಸಿರುವ ಘಟನೆ ಆರ್.ಟಿ. ನಗರದಲ್ಲಿ ನಡೆದಿದೆ. ಬಕ್ರೀದ್ ಹಬ್ಬದ ಹಿನ್ನೆಲೆ ನಗರದ ರಾಧಾಕೃಷ್ಣ ಥಿಯೇಟರ್ ಮುಂಭಾಗದಲ್ಲಿರುವ ಕುರಿ ಮಾರುಕಟ್ಟೆಗೆ ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಮಾರುಕಟ್ಟೆಯ ಸುರಕ್ಷತೆಗಾಗಿ ಶಿಫ್ಟ್ ಆಧಾರದ ಮೇಲೆ ಒಬ್ಬ ಪಿಎಸ್ಐ ಸೇರಿದಂತೆ ಹತ್ತಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಹಾಗೂ ಒಂದು ಕೆಎಸ್ಆರ್‌ಪಿ (KSRP) ತುಕಡಿಯನ್ನು ಸ್ಥಳದಲ್ಲಿ ನಿಯೋಜನೆ ಮಾಡಲಾಗಿದೆ.

ಬೆಂಗಳೂರು, ಮೇ 27: ಬೆಂಗಳೂರಿನ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕುರಿಗಳನ್ನು ಕಾಯಲು ಪೊಲೀಸರನ್ನು ನಿಯೋಜಿಸಿರುವ ಘಟನೆ ಆರ್.ಟಿ. ನಗರದಲ್ಲಿ ನಡೆದಿದೆ. ಬಕ್ರೀದ್ ಹಬ್ಬದ ಹಿನ್ನೆಲೆ ನಗರದ ರಾಧಾಕೃಷ್ಣ ಥಿಯೇಟರ್ ಮುಂಭಾಗದಲ್ಲಿರುವ ಕುರಿ ಮಾರುಕಟ್ಟೆಗೆ ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಮಾರುಕಟ್ಟೆಯ ಸುರಕ್ಷತೆಗಾಗಿ ಶಿಫ್ಟ್ ಆಧಾರದ ಮೇಲೆ ಒಬ್ಬ ಪಿಎಸ್ಐ ಸೇರಿದಂತೆ ಹತ್ತಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಹಾಗೂ ಒಂದು ಕೆಎಸ್ಆರ್‌ಪಿ (KSRP) ತುಕಡಿಯನ್ನು ಸ್ಥಳದಲ್ಲಿ ನಿಯೋಜನೆ ಮಾಡಲಾಗಿದೆ.

ಇಷ್ಟು ವರ್ಷ ಇಲ್ಲದ ಭದ್ರತೆಯನ್ನು ಈ ವರ್ಷ ಮಾಡಿದ್ದಾರೆ ಎಂದು ನಿಯೋಜನೆಗೊಂಡಿರುವ ಪೊಲೀಸ್ ಸಿಬ್ಬಂದಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಿರಿಯ ಅಧಿಕಾರಿಗಳ ಈ ಆದೇಶ ಇಲಾಖೆಯಲ್ಲೇ ಭಾರಿ ಚರ್ಚೆಗೆ ಕಾರಣವಾಗಿದೆ. ಕಳ್ಳರನ್ನು ಹಿಡಿಯಬೇಕಾದ ಪೊಲೀಸರು ಕುರಿ ಕಾಯುವ ಪರಿಸ್ಥಿತಿ ಎದುರಾಗಿದೆ.

ವರದಿ: ವಿಕಾಸ್, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Follow Us
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More