ಏಯ್‌ ಹತ್ತೋ ಗಾಡಿ… ಸಚಿವರ ಮನೆ ಮುಂದೆ ಪ್ರತಿಭಟಿಸಿದ ABVP ಕಾರ್ಯಕರ್ತರನ್ನು ಎಳೆದೊಯ್ದ ಪೊಲೀಸ್

Updated on: Sep 26, 2025 | 5:49 PM

ಅತಿಥಿ ಉಪನ್ಯಾಸಕರ ನೇಮಕಾತಿ ವಿಳಂಬ ಖಂಡಿಸಿ ಎಬಿವಿಪಿ ಕಾರ್ಯಕರ್ತರು ಬೆಂಗಳೂರಿನಲ್ಲಿ ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ ನಿವಾಸದ ಮನೆ ಮುಂದೆ ಪ್ರತಿಭಟನೆಯನ್ನು ನಡೆಸಿದ್ದಾರೆ. ಅತಿಥಿ ಉಪನ್ಯಾಸಕರ ನೇಮಕ ಮಾಡದೆ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಧರಣಿ ನಡೆಸುತ್ತಿದ್ದ ವೇಳೆ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್‌ 26: ಅತಿಥಿ ಉಪನ್ಯಾಸಕರ ನೇಮಕಾತಿ ವಿಳಂಬ ಖಂಡಿಸಿ ಎಬಿವಿಪಿ (ABVP)  ಕಾರ್ಯಕರ್ತರು ಬೆಂಗಳೂರಿನ ಸಂಜಯ್‌ ನಗರದಲ್ಲಿರುವ ಉನ್ನತ ಶಿಕ್ಷಣ ಸಚಿವ ಎಂ.ಪಿ ಸುಧಾಕರ್‌ ಅವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಅತಿಥಿ ಉಪನ್ಯಾಸಕರ ನೇಮಕ ಮಾಡದೆ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ, ಈ ಸರ್ಕಾರಕ್ಕೆ ಧಿಕ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿ ಸಚಿವರ ಮನೆ ಮುಂದೆ ಧರಣಿ ನಡೆಸುತ್ತಿದ್ದಾರೆ. ಈ ವೇಳೆ ಪೋಲಿಸರು ಬಂದು ಹತ್ರೋ ಗಾಡಿ ಎಂದು ಹೇಳಿ ಕೆಲ ಪ್ರತಿಭಟನಕಾರರನ್ನು ವಶಕ್ಕೆ ಪಡೆದಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ