AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಮುಂದುವರೆದ ರಸ್ತೆ ಗುಂಡಿಗಳ ಕಾಟ: ಖುದ್ದು ಗುಂಡಿ ಮುಚ್ಚಿದ ಸಂಚಾರಿ ಪೊಲೀಸರು

ಬೆಂಗಳೂರಲ್ಲಿ ಮುಂದುವರೆದ ರಸ್ತೆ ಗುಂಡಿಗಳ ಕಾಟ: ಖುದ್ದು ಗುಂಡಿ ಮುಚ್ಚಿದ ಸಂಚಾರಿ ಪೊಲೀಸರು

ಅರುಣ್ ಕುಮಾರ್​ ಆರ್​.
| Edited By: |

Updated on: Nov 09, 2026 | 5:50 PM

Share

ಮುಖ್ಯಾಂಶಗಳು

  • ಬೆಂಗಳೂರು ನಗರದಲ್ಲಿ ಮುಂದುವರಿದ ರಸ್ತೆ ಗುಂಡಿಗಳ ಸಮಸ್ಯೆ
  • ಜಿಬಿಎ ಬದಲಿಗೆ ಪೊಲೀಸರಿಂದಲೇ ಗುಂಡಿ ಮುಚ್ಚುವ ಕಾರ್ಯ
  • ಜ್ಞಾನಭಾರತಿ ಮೆಟ್ರೋ ನಿಲ್ದಾಣದ ಬಳಿ‌ ಗುಂಡಿ ಮುಚ್ಚಿದ ಪೊಲೀಸರು

ಬೆಂಗಳೂರಿನ ಜ್ಞಾನಭಾರತಿ ಮೆಟ್ರೋ ನಿಲ್ದಾಣದ ಬಳಿ ರಸ್ತೆ ಗುಂಡಿಗಳಿಂದ ಜನರಿಗೆ ಆಗುತ್ತಿದ್ದ ತೊಂದರೆಗೆ ಪೊಲೀಸರು ಸ್ಪಂದಿಸಿದ್ದಾರೆ. ಬಿಬಿಎಂಪಿ ಅಧಿಕಾರಿಗಳು ಹಲವು ಬಾರಿ ಗಮನಕ್ಕೆ ತಂದರೂ ಗುಂಡಿ ಮುಚ್ಚದಿದ್ದಾಗ, ಸಂಚಾರಿ ಪೊಲೀಸರೇ ಖುದ್ದು ಸಿಮೆಂಟ್ ಬಳಸಿ ಗುಂಡಿಗಳನ್ನು ಮುಚ್ಚಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

ಬೆಂಗಳೂರು, ನವೆಂಬರ್​​ 09: ನಗರದಲ್ಲಿ ರಸ್ತೆ ಗುಂಡಿಗಳ ಸಮಸ್ಯೆ ಮುಂದುವರೆದಿದ್ದು, ಜಿಬಿಎ ಬದಲಿಗೆ ಪೊಲೀಸರೇ ಗುಂಡಿ ಮುಚ್ಚಿರುವ ಘಟನೆ ಜಿಬಿಎ ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಗೆ ಸೇರುವ ಜ್ಞಾನಭಾರತಿ ಮೆಟ್ರೋ ನಿಲ್ದಾಣದ ಬಳಿ‌ ನಡೆದಿದೆ. ವಾರ್ಡ್ ಒನ್ ಅಭಿಯಾನ ಮಾಡಿದರೂ ಗುಂಡಿಗಳಿಂದ ಮುಕ್ತಿ ಸಿಕ್ಕಿಲ್ಲ. ಹಲವು ಬಾರಿ ಗಮನಕ್ಕೆ ತಂದರೂ ಜಿಬಿಎ ಅಧಿಕಾರಿಗಳು ಗುಂಡಿ ಮುಚ್ಚಿಲ್ಲ. ಹೀಗಾಗಿ ಕೊನೆಗೆ ಜ್ಞಾನಭಾರತಿ ಸಂಚಾರಿ ಪೊಲೀಸರೇ ಸಿಮೆಂಟ್ ಹಾಕಿ ರಸ್ತೆ ಗುಂಡಿ ಮುಚ್ಚಿದ್ದಾರೆ. ಆ ಮೂಲಕ ಪಾಲಿಕೆ ಅಧಿಕಾರಿಗಳಿಗೆ ಕೆಲಸ ಮೂಲಕ ಪೊಲೀಸರು ಛೀಮಾರಿ ಹಾಕಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ಅರುಣ್ ಕುಮಾರ್​ ಆರ್​.
ಅರುಣ್ ಕುಮಾರ್​ ಆರ್​.

ಅರುಣ್ ಕುಮಾರ್ ಆರ್. ಬೆಂಗಳೂರಿನ ಜ್ಞಾನಭಾರತಿ ವಿವಿಯಲ್ಲಿ ಸಮೂಹ ಸಂವಹನ ಹಾಗೂ ತಂತ್ರಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪ್ರಸ್ತುತ ಟಿವಿ9 ಕನ್ನಡದಲ್ಲಿ ಮೆಟ್ರೋ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಜಿಬಿಎ ಹಾಗೂ ನಗರದ ಅಭಿವೃದ್ಧಿ ಕ್ಷೇತ್ರದಲ್ಲಿ ಒಂದು ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವ ಇವರು, ಒಟ್ಟು 2 ವರ್ಷಗಳ ವರದಿಗಾರಿಕೆ ಅನುಭವದೊಂದಿಗೆ ಜನೋಪಯೋಗಿ ವಿಷಯಗಳ ಕುರಿತು ವರದಿ ಮಾಡುತ್ತಿದ್ದಾರೆ.

Read More