ಬೆಂಗಳೂರು ರೌಡಿ ಶೀಟರ್‌ಗಳಿಗೆ ಪೊಲೀಸ್ ಆಯುಕ್ತರ ಖಡಕ್ ವಾರ್ನಿಂಗ್: ಸಿಎಂ ಸೂಚನೆ ಬೆನ್ನಲ್ಲೇ ಕಾರ್ಯಾಚರಣೆ ತೀವ್ರ

Edited By:

Updated on: Nov 22, 2026 | 11:29 AM

ಮುಖ್ಯಮಂತ್ರಿಗಳ ಸ್ಪಷ್ಟ ನಿರ್ದೇಶನದ ಬೆನ್ನಲ್ಲೇ ಬೆಂಗಳೂರಿನಲ್ಲಿ ರೌಡಿ ಶೀಟರ್‌ಗಳ ವಿರುದ್ಧ ಪೊಲೀಸ್ ಇಲಾಖೆ ಸಮಗ್ರ ಕಾರ್ಯಾಚರಣೆ ಆರಂಭಿಸಿದೆ. ಮುಖ್ಯ ಪೊಲೀಸ್ ಆಯುಕ್ತ ಆರ್. ಹಿತೇಂದ್ರ ಹಾಗೂ ಕ್ರೈಂ ಕಮಿಷನರ್ ಹೇಮಂತ್ ನಿಂಬಾಳ್ಕರ್ ಅವರ ಸೂಚನೆ ಅನ್ವಯ, ಗಂಭೀರ ಅಪರಾಧಗಳಲ್ಲಿ ಭಾಗಿಯಾದ ರೌಡಿಗಳನ್ನು ಗುರಿಯಾಗಿಸಿ, ಕಾನೂನುಬದ್ಧವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.

ಬೆಂಗಳೂರು, ನವೆಂಬರ್ 22: ಪೊಲೀಸ್ ಇಲಾಖೆಯು ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ರೌಡಿಗಳು, ಸುಲಿಗೆ ಮತ್ತು ಮಚ್ಚು-ಲಾಂಗುಗಳೊಂದಿಗೆ ಓಡಾಡುವ ಸಮಾಜಘಾತುಕ ಶಕ್ತಿಗಳನ್ನು ಹತ್ತಿಕ್ಕುವ ಗುರಿ ಹೊಂದಿದೆ. ಪೂರ್ವ ವಿಭಾಗದಲ್ಲಿ 325 ರೌಡಿಗಳಿದ್ದು, ಅವರಲ್ಲಿ 304 ಮಂದಿ ನಿಯಮಿತವಾಗಿ ಹಾಜರಾಗುತ್ತಿದ್ದಾರೆ. ಆದರೆ, ಕೊಲೆ ಪ್ರಕರಣಗಳು ಸೇರಿದಂತೆ ಗಂಭೀರ ಅಪರಾಧಗಳಲ್ಲಿ ಶಾಮೀಲಾದ ರೌಡಿಗಳನ್ನು, ಅದರಲ್ಲೂ ವಿಶೇಷವಾಗಿ ತಲೆಮರೆಸಿಕೊಂಡವರನ್ನು ಗುರುತಿಸಿ ಮೊದಲು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಪೂರ್ವ ವಿಭಾಗದ ಆಯುಕ್ತ ಡಾ.ಪಿ.ಎಸ್.ಹರ್ಷ ತಿಳಿಸಿದ್ದಾರೆ. ಕಾನೂನುಬದ್ಧವಾಗಿ ಕಾರ್ಯನಿರ್ವಹಿಸುವ ಮೂಲಕ ರೌಡಿಗಳಿಗೆ ಯಾವುದೇ ಕಾರಣಕ್ಕೂ ನ್ಯಾಯಾಲಯದ ದಿನಾಂಕಗಳನ್ನು ತಪ್ಪಿಸಲು ಅವಕಾಶ ನೀಡುವುದಿಲ್ಲ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ರೌಡಿ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕರ್ನಾಟಕ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಗೃಹ ಸಚಿವರ ಸೂಚನೆಯಂತೆ, ಬೆಂಗಳೂರು ನಗರ ಕಮಿಷನರೇಟ್ ಅನ್ನು ಪುನರ್ರಚಿಸಿ, ಕಾನೂನು ಸುವ್ಯವಸ್ಥೆಯನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಪ್ರಮುಖ ಸಭೆ ನಡೆಸಲಾಗಿದೆ. ಈ ಸಭೆಯಲ್ಲಿ ಮುಖ್ಯ ಪೊಲೀಸ್ ಆಯುಕ್ತ ಆರ್. ಹಿತೇಂದ್ರ ಹಾಗೂ ಕ್ರೈಂ ಕಮಿಷನರ್ ಹೇಮಂತ್ ನಿಂಬಾಳ್ಕರ್ ಭಾಗವಹಿಸಿದ್ದು, ರೌಡಿ ಶೀಟರ್‌ಗಳ ವಿರುದ್ಧ ಸಮಗ್ರ ಕಾರ್ಯಾಚರಣೆಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಇದರ ಬೆನ್ನಲ್ಲೇ ಕಾರ್ಯಾಚರಣೆ ಶುರುವಾಗಿದ್ದು, ಇದೀಗ ಹರ್ಷ ಆ ಬಗ್ಗೆ ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್ ಅವರು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನವರು. ಕಳೆದ 2 ವರ್ಷದಿಂದ ಟಿವಿ9 ಕನ್ನಡದ ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ ಅನುಭವವಿದೆ. ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದಾರೆ.

Read More