‘ಬಂದರೋ ಬಂದರೋ ಭಾವ ಬಂದರೋ’ ಎಂದು ರಿಕ್ಕಿ ರೈ ಲಾಯರ್ ಕಾಲೆಳೆದ ಪೊಲೀಸರು!

Edited By:

Updated on: Mar 24, 2026 | 11:26 AM

ಲ್ಯಾಂಬೋರ್ಗಿನಿ ಕಾರ್ ಡ್ರಿಫ್ಟಿಂಗ್ ಪ್ರಕರಣದಲ್ಲಿ ರಿಕ್ಕಿ ರೈ ವಿರುದ್ಧ ಪ್ರಕರಣ ದಾಖಲಾದ ಬೆನ್ನಲ್ಲೇ ಹೊಸ ವಿವಾದ ಸೃಷ್ಟಿಯಾಗಿದೆ. ಜಾಮೀನು ಪಡೆದು ವಿಚಾರಣೆಗೆ ಹಾಜರಾದ ರಿಕ್ಕಿ ರೈ ಪರ ವಕೀಲ ನಾರಾಯಣಸ್ವಾಮಿ, ಚಾಲಕನ ಸೃಜನಶೀಲತೆಯಿಂದ ಕಾರು ಸ್ಕಿಡ್ ಆಗಿದೆ ಎಂದು ಸಮರ್ಥಿಸಿಕೊಂಡಿದ್ದರು. ರಸ್ತೆ ಇತ್ತೀಚೆಗೆ ದುರಸ್ತಿ ಮಾಡಿದ್ದರಿಂದ ಬ್ರೇಕ್ ಹೊಡೆದಾಗ ನಿಯಂತ್ರಣ ತಪ್ಪಿದೆ ಎಂದೂ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಬೆಂಗಳೂರು ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯವಾಗಿ ಪೋಸ್ಟ್ ಮಾಡಿ, ಸೃಜನಶೀಲತೆ ಪ್ರದರ್ಶನಕ್ಕೆ ಸಿಗ್ನಲ್‌ಗಳು ವೇದಿಕೆಯಲ್ಲ ಎಂದು ಟೀಕಿಸಿದ್ದಾರೆ. ಜೊತೆಗೆ “ಬಂದರೋ ಬಂದರೋ ಭಾವ ಬಂದರೋ” ಎಂದು ಕಾಲೆಳೆದಿದ್ದಾರೆ. ಈ ಪೋಸ್ಟ್ ಇದೀಗ ವೈರಲ್ ಆಗಿದೆ.

ಬೆಂಗಳೂರು, ಮಾರ್ಚ್​ 24: ಲ್ಯಾಂಬೋರ್ಗಿನಿ ಕಾರ್ ಡ್ರಿಫ್ಟಿಂಗ್ ಪ್ರಕರಣದಲ್ಲಿ ರಿಕ್ಕಿ ರೈ ವಿರುದ್ಧ ಪ್ರಕರಣ ದಾಖಲಾದ ಬೆನ್ನಲ್ಲೇ ಹೊಸ ವಿವಾದ ಸೃಷ್ಟಿಯಾಗಿದೆ. ಜಾಮೀನು ಪಡೆದು ವಿಚಾರಣೆಗೆ ಹಾಜರಾದ ರಿಕ್ಕಿ ರೈ ಪರ ವಕೀಲ ನಾರಾಯಣಸ್ವಾಮಿ, ಚಾಲಕನ ಸೃಜನಶೀಲತೆಯಿಂದ ಕಾರು ಸ್ಕಿಡ್ ಆಗಿದೆ ಎಂದು ಸಮರ್ಥಿಸಿಕೊಂಡಿದ್ದರು. ರಸ್ತೆ ಇತ್ತೀಚೆಗೆ ದುರಸ್ತಿ ಮಾಡಿದ್ದರಿಂದ ಬ್ರೇಕ್ ಹೊಡೆದಾಗ ನಿಯಂತ್ರಣ ತಪ್ಪಿದೆ ಎಂದೂ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಬೆಂಗಳೂರು ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯವಾಗಿ ಪೋಸ್ಟ್ ಮಾಡಿ, ಸೃಜನಶೀಲತೆ ಪ್ರದರ್ಶನಕ್ಕೆ ಸಿಗ್ನಲ್‌ಗಳು ವೇದಿಕೆಯಲ್ಲ ಎಂದು ಟೀಕಿಸಿದ್ದಾರೆ. ಜೊತೆಗೆ “ಬಂದರೋ ಬಂದರೋ ಭಾವ ಬಂದರೋ” ಎಂದು ಕಾಲೆಳೆದಿದ್ದಾರೆ. ಈ ಪೋಸ್ಟ್ ಇದೀಗ ವೈರಲ್ ಆಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More