ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: 31 ಬಾಂಗ್ಲಾದೇಶಿ ಪ್ರಜೆಗಳ ಪತ್ತೆ, ಗಡಿಪಾರಿಗೆ ಕಾರ್ಯಾಚರಣೆ

Edited By:

Updated on: Aug 31, 2026 | 12:26 PM

ಬೆಂಗಳೂರು ಪೊಲೀಸರ ‘ಆಪರೇಷನ್ ಮುಕ್ತ’ ಕಾರ್ಯಾಚರಣೆಯ ಮೂಲಕ 31 ಬಾಂಗ್ಲಾದೇಶಿ ಪ್ರಜೆಗಳನ್ನು ಪತ್ತೆ ಹಚ್ಚಿ ಗಡೀಪಾರು ಮಾಡಲು ಕ್ರಮ ಕೈಗೊಳ್ಳಲಾಗಿದೆ. ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿ ಸಾವಿರಕ್ಕೂ ಹೆಚ್ಚು ಜನರ ದಾಖಲೆಗಳನ್ನು ಪರಿಶೀಲಿಸಲಾಗಿದ್ದು. ಅಕ್ರಮವಾಗಿ ನೆಲೆಸಿದ್ದವರನ್ನು ಭಾರತದಿಂದ ಹೊರ ಕಳಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಪ್ರಕ್ರಿಯೆ ಹಂತ ಹಂತವಾಗಿ ಮುಂದುವರಿಯಲಿದೆ.

ಬೆಂಗಳೂರು, ಆಗಸ್ಟ್ 31: ಬೆಂಗಳೂರು ಪೊಲೀಸರು ‘ಆಪರೇಷನ್ ಮುಕ್ತ’ ಹೆಸರಿನಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ 31 ಬಾಂಗ್ಲಾದೇಶಿ ಪ್ರಜೆಗಳನ್ನು ಪತ್ತೆ ಹಚ್ಚಿ, ಅವರನ್ನು ಗಡೀಪಾರು ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯ 10 ಪೊಲೀಸ್ ಠಾಣೆಗಳ ಅಡಿಯಲ್ಲಿ ಸಾವಿರಕ್ಕೂ ಹೆಚ್ಚು ಜನರ ದಾಖಲೆಗಳನ್ನು ಪರಿಶೀಲಿಸಲಾಯಿತು. ಪರಿಶೀಲನೆಯ ವೇಳೆ, ಭಾರತದಲ್ಲಿ ಅಕ್ರಮವಾಗಿ ವಾಸವಾಗಿದ್ದ 31 ಬಾಂಗ್ಲಾದೇಶಿ ಪ್ರಜೆಗಳನ್ನು ಗುರುತಿಸಲಾಯಿತು. ಇವರನ್ನು ಮೊದಲು ರೈಲಿನ ಮೂಲಕ ಪಶ್ಚಿಮ ಬಂಗಾಳದ ಮಾಲ್ಡಾಗೆ ಸ್ಥಳಾಂತರಿಸಲಾಗುತ್ತಿದೆ. ಬೆಂಗಳೂರಿನಿಂದ 20 ಪೊಲೀಸರ ತಂಡ ಅವರನ್ನು ಎಸ್ಕಾರ್ಟ್ ಮಾಡಿ ಕರೆದೊಯ್ಯುತ್ತಿದೆ. ಮಾಲ್ಡಾದಲ್ಲಿ ಅವರನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಅಧಿಕಾರಿಗಳ ವಶಕ್ಕೆ ಹಸ್ತಾಂತರಿಸಲಾಗುತ್ತದೆ. ಬಿಎಸ್‌ಎಫ್ ಮೂಲಕ ಈ ಪ್ರಜೆಗಳನ್ನು ಅವರ ದೇಶವಾದ ಬಾಂಗ್ಲಾದೇಶಕ್ಕೆ ಹಿಂದಿರುಗಿಸಲಾಗುವುದು.

ಬೆಂಗಳೂರಿನಲ್ಲಿ ಬಹಳ ದಿನಗಳಿಂದ ಅಕ್ರಮವಾಗಿ ನೆಲೆಸಿದ್ದ ಈ ಬಾಂಗ್ಲಾದೇಶಿಯರನ್ನು ಹಂತ ಹಂತವಾಗಿ ಭಾರತದಿಂದ ಹೊರಕಳುಹಿಸುವ ಕಾರ್ಯ ನಡೆಯುತ್ತಿದೆ. ಕಳೆದ ಒಂದು ತಿಂಗಳಿಂದ ಈ ಕಾರ್ಯಾಚರಣೆ ನಡೆಯುತ್ತಿದ್ದು, ಮುಂದಿನ 10-15 ದಿನಗಳ ಕಾಲವೂ ಈ ಪ್ರಕ್ರಿಯೆ ಮುಂದುವರಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us