ಬೆಂಗಳೂರಲ್ಲಿ 191 ಮಸಾಜ್, ಸ್ಪಾಗಳ ಮೇಲೆ ಪೊಲೀಸರ ದಿಢೀರ್​ ದಾಳಿ: 16 ಪಾರ್ಲರ್​​ಗಳಿಗೆ ನೋಟಿಸ್​​

ಬೆಂಗಳೂರಲ್ಲಿ 191 ಮಸಾಜ್, ಸ್ಪಾಗಳ ಮೇಲೆ ಪೊಲೀಸರ ದಿಢೀರ್​ ದಾಳಿ: 16 ಪಾರ್ಲರ್​​ಗಳಿಗೆ ನೋಟಿಸ್​​

Updated on: Nov 29, 2026 | 3:43 PM

ಮುಖ್ಯಾಂಶಗಳು

  • ಬೆಂಗಳೂರಿನಲ್ಲಿ 191 ಸ್ಪಾಗಳ ಮೇಲೆ ಪೊಲೀಸ್ ದಾಳಿ
  • ನಿಯಮ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ
  • 16 ಪಾರ್ಲರ್‌ಗಳಿಗೆ ನೋಟಿಸ್ ಜಾರಿ

ಬೆಂಗಳೂರು ಪೊಲೀಸರು ಪೂರ್ವ ಕಮಿಷನರೇಟ್ ವ್ಯಾಪ್ತಿಯಲ್ಲಿ 191 ಸ್ಪಾ ಮತ್ತು ಮಸಾಜ್ ಪಾರ್ಲರ್‌ಗಳ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ. ನಿಯಮ ಉಲ್ಲಂಘನೆ ಮತ್ತು ಪರವಾನಗಿ ಇಲ್ಲದ 16 ಪಾರ್ಲರ್‌ಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಸಾರ್ವಜನಿಕರ ಸುರಕ್ಷತೆಗಾಗಿ ಪೂರ್ವ ಕಮಿಷನರ್ ಪಿ.ಎಸ್. ಹರ್ಷ ಅವರ ಸೂಚನೆಯ ಮೇರೆಗೆ ಈ ಪರಿಶೀಲನೆ ನಡೆದಿದ್ದು, ಮುಂದಿನ ತನಿಖೆ ಮುಂದುವರಿಯಲಿದೆ.

ಬೆಂಗಳೂರು, ನವೆಂಬರ್​​ 29: ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಸಾಜ್ ಮತ್ತು ಸ್ಪಾ ಪಾರ್ಲರ್‌ಗಳ ಮೇಲೆ ಬೆಂಗಳೂರು ಪೊಲೀಸರು ದಾಳಿ ಮಾಡಿದ್ದಾರೆ. ಪೂರ್ವ ಕಮಿಷನರೇಟ್​ನ 11 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಒಟ್ಟು 191 ಸ್ಪಾ ಮತ್ತು ಮಸಾಜ್ ಪಾರ್ಲರ್‌ಗಳನ್ನು ಪರಿಶೀಲಿಸಲಾಗಿದ್ದು, ನಿಯಮ ಉಲ್ಲಂಘಿಸಿದ 16 ಪಾರ್ಲರ್‌ಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಪೂರ್ವ ಕಮಿಷನರ್ ಪಿ.ಎಸ್. ಹರ್ಷ ಸೂಚನೆ ಮೇರೆಗೆ ದಿಢೀರ್ ಪರಿಶೀಲನೆ ಮಾಡಲಾಗಿದೆ. ಪಾರ್ಲರ್‌ಗಳ ಪ್ರವೇಶ ಮತ್ತು ನಿರ್ಗಮನ ದ್ವಾರಗಳಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ ಕಾರ್ಯನಿರ್ವಹಣೆ, ಸಿಬ್ಬಂದಿಯ ಗುರುತಿನ ಚೀಟಿ ಮತ್ತು ವಿಳಾಸದ ಪರಿಶೀಲನೆ, ಹಾಗೂ ಗ್ರಾಹಕರ ಲೆಡ್ಜರ್ ಪುಸ್ತಕಗಳನ್ನು ಕೂಲಂಕಷವಾಗಿ ಪರಿಶೀಲಿಸಲಾಯಿತು. ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More