Bengaluru: ಡ್ರಗ್ಸ್ ದಂಧೆಕೋರರಿಗೆ ಶಾಕ್; 3 ಕೆ.ಜಿ. MDMA ಸೀಜ್, ಇಬ್ಬರು ಅರೆಸ್ಟ್
ಹೊಸ ವರ್ಷದ ಸಂಭ್ರಮದ ನಡುವೆ ಬೆಂಗಳೂರು ಪೊಲೀಸರು 3 ಕೋಟಿ ಮೌಲ್ಯದ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ 3 ಕೆ.ಜಿ. 169 ಗ್ರಾಂ ತೂಕದ ಕ್ರಿಸ್ಟಲ್ ಡ್ರಗ್ಸ್ ವಶಕ್ಕೆ ಪಡೆದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ನೈಜೀರಿಯಾ ಮೂಲದ ವ್ಯಕ್ತಿಯಿಂದ ಡ್ರಗ್ಸ್ ಪೂರೈಕೆಯಾದ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು, ಜನವರಿ 06: ಹೊಸ ವರ್ಷದ ಸಂಭ್ರಮದ ನಡುವೆ ಬೆಂಗಳೂರು ಪೊಲೀಸರು 3 ಕೋಟಿ ಮೌಲ್ಯದ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಸಿದ ದಾಳಿಯಲ್ಲಿ ಅಂದಾಜು 3.16 ಕೋಟಿ ರೂ. ಮೌಲ್ಯದ, 3 ಕೆ.ಜಿ. 169 ಗ್ರಾಂ ತೂಕದ ಎಂಡಿಎಂಎ ಕ್ರಿಸ್ಟಲ್ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಯದ್ ತಾರಿಕ್ ಇಕ್ಬಾಲ್, ಶೇಕ್ ಮೊಹಮ್ಮದ್ ಅರ್ಬಾಸ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರು ಬೆಂಗಳೂರು ನಿವಾಸಿಗಳಾಗಿದ್ದು, ಹೊಸ ವರ್ಷದ ಪಾರ್ಟಿಗಳಿಗೆ ಮಾದಕ ವಸ್ತುಗಳನ್ನು ಪೂರೈಸಲು ಸಿದ್ಧತೆ ನಡೆಸಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಡ್ರಗ್ಸ್‌ಗಳನ್ನು ನೈಜೀರಿಯಾ ಮೂಲದ ವ್ಯಕ್ತಿಯಿಂದ ಪಡೆದಿರುವ ಶಂಕೆ ವ್ಯಕ್ತವಾಗಿದ್ದು, ಆತನ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
