ರಜೆ ಮುಗಿಸಿ ಬೆಂಗಳೂರಿನತ್ತ ಜನ: ನೆಲಮಂಗಲ ಬಳಿ ಫುಲ್ ಟ್ರಾಫಿಕ್ ಜಾಮ್

ಬಿ ಮೂರ್ತಿ, ನೆಲಮಂಗಲ Edited By:

Updated on: Nov 18, 2024 | 9:55 PM

ವಿವಿಧ ಜಿಲ್ಲೆಗಳಿಂದ ರಜೆ ಮುಗಿಸಿ ಬೆಂಗಳೂರಿನತ್ತ ಮುಖ ಮಾಡಿದ್ದಾರೆ. ಇದರಿಂದ ನೆಲಮಂಗಲ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಟ್ರಾಫಿಕ್‌ಜಾಮ್ ಉಂಟಾಗಿದೆ.

ಬೆಂಗಳೂರು, (ನವೆಂಬರ್ 18): ಶನಿವಾರ, ಭಾನುವಾರ ಹಾಗೂ ಇಂದು ಸೋಮವಾರ ಕನಕದಾಸ ಜಯಂತಿ ರಜೆ ಮುಗಿಸಿಕೊಂಡು ಜನ ಇದೀಗ ಬೆಂಗಳೂರಿನತ್ತ ಮುಖ ಮಾಡಿದ್ದಾರೆ. ನಾಳೆಯಿಂದ (ನವೆಂಬರ್ 19) ಸರ್ಕಾರಿ ಕಚೇರಿ, ಐಟಿ ಬಿಟಿ ಕಂಪನಿಗಳು ವರ್ಕಿಂಗ್​ ಇರುವುದರಿಂದ ಊರಿಗೆ ಹೋಗಿದ್ದವರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಹೀಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಟ್ರಾಫಿಕ್‌ ಜಾಮ್ ಉಂಟಾಗಿದೆ. ಇದರಿಂದ ವಾಹನ ಸವಾರರು ಪರದಾಡುತ್ತಿದ್ದಾರೆ.

Loading...
Unable to load recommendations.
Follow Us
ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,