ಶ್ರೀರಾಮ ಮಂದಿರದ ಚಿತ್ರ ಬಿಡಿಸಿ ಗಮನ ಸೆಳೆದ ಪಿಎಸ್ಐ
ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗಿದೆ. ಈಗಾಗಲೆ ರಾಮಲ್ಲಾ (ಬಾಲ ರಾಮ)ನ ಮೂರ್ತಿ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗಿದೆ. ಜನವರಿ 22 ರಂದು ಪ್ರಾಣ ಪ್ರತಿಷ್ಠೆ ನೆರವೇರಲಿದೆ. ಬೆಂಗಳೂರಿನ ಪೊಲೀಸ್ ಅಧಿಕಾರಿಯೊಬ್ಬರು ರಾಮಮಂದಿರ ಚಿತ್ರ ಬಿಡಿಸಿದ್ದಾರೆ.
ಅಯೋಧ್ಯೆಯಲ್ಲಿ (Ayodhya) ಭವ್ಯ ರಾಮಮಂದಿರ (Ram Mandir) ನಿರ್ಮಾಣವಾಗಿದೆ. ಈಗಾಗಲೆ ರಾಮಲ್ಲಾ (ಬಾಲ ರಾಮ)ನ ಮೂರ್ತಿ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗಿದೆ. ಜನವರಿ 22 ರಂದು ಪ್ರಾಣ ಪ್ರತಿಷ್ಠೆ ನೆರವೇರಲಿದೆ. ಜಗತ್ತೇ ಬಾಲ ರಾಮನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮವನ್ನು ವೀಕ್ಷಿಸಲು ತುದಿಗಾಲಿನ ಮೇಲೆ ನಿಂತಿದೆ. ದೇಶದ ಅಸಂಖ್ಯ ಭಕ್ತರು ಕಲೆ, ಸಂಗೀತ, ಸಾಹಿತ್ಯ ಹೀಗೆ ವಿವಿಧ ರೀತಿಯಲ್ಲಿ ರಾಮನಿಗೆ ತಮ್ಮ ಭಕ್ತಿಯನ್ನು ಸಮರ್ಪಿಸುತ್ತಿದ್ದಾರೆ. ಇದೀಗ ಬೆಂಗಳೂರಿನ ಪೊಲೀಸ್ ಅಧಿಕಾರಿಯೊಬ್ಬರು ರಾಮಮಂದಿರ ಚಿತ್ರ ಬಿಡಿಸಿದ್ದಾರೆ. ಹೌದು ಗಿರಿನಗರ ಠಾಣೆಯ ಪೊಲೀಸ್ ಸಬ್ಇನ್ಸ್ ಪೆಕ್ಟರ್ ಮಂಜುನಾಥ್ ಅವರಿಗೆ ಚಿತ್ರ ಬಿಡಿಸುವುದು ತುಂಬಾ ಇಷ್ಟ. ಇದನ್ನು ಹವ್ಯಾಸ ಮಾಡಿಕೊಂಡಿದ್ದಾರೆ. ಇದೀಗ ಶ್ರೀರಾಮಮಂದಿರ ಚಿತ್ರ ಬಿಡಿಸುವ ಮೂಲಕ ಸಿಬ್ಬಂದಿ ಮತ್ತು ಜನರ ಗಮನ ಸೆಳೆದಿದ್ದಾರೆ. ಇವರು ಚಿತ್ರ ಬಿಡಿಸುತ್ತಿರುವ ವಿಡಿಯೋ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆ ವ್ಯಕ್ತವಾಗುತ್ತಿದೆ.
Latest Videos