ಬೆಂಗಳೂರು: ಹೊಯ್ಸಳ ನಗರ ಪಬ್​ನಲ್ಲಿ ರಾತ್ರಿ ಅಗ್ನಿ ಅವಘಡ, ತಪ್ಪಿದ ಭಾರಿ ದುರಂತ

Updated on: Nov 04, 2026 | 6:39 AM

ಬೆಂಗಳೂರಿನ ಹೊಯ್ಸಳ ನಗರದ ಪಬ್‌ವೊಂದರಲ್ಲಿ ಅಡುಗೆಮನೆಯ ಚಿಮಣಿ ಅತಿಯಾಗಿ ಬಿಸಿಯಾದ ಕಾರಣ ಮಂಗಳವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಸ್ಥಳೀಯರ ಸಮಯಪ್ರಜ್ಞೆ ಮತ್ತು ಅಗ್ನಿಶಾಮಕ ದಳದ ತಕ್ಷಣದ ಕಾರ್ಯಾಚರಣೆಯಿಂದ ಬೆಂಕಿ ನಂದಿಸಲಾಯಿತು. ಅದೃಷ್ಟವಶಾತ್, ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಅಥವಾ ಗಂಭೀರ ಹಾನಿ ಸಂಭವಿಸಿಲ್ಲ.

ಬೆಂಗಳೂರು, ನವೆಂಬರ್ 4: ಬೆಂಗಳೂರಿನ ಹೊಯ್ಸಳ ನಗರದಲ್ಲಿರುವ ಪಬ್‌ವೊಂದರಲ್ಲಿ ಮಂಗಳವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಪಬ್‌ನ ಅಡುಗೆಮನೆಯ ಚಿಮಣಿ ಅತಿಯಾಗಿ ಬಿಸಿಯಾದ ಕಾರಣ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ. ಈ ಘಟನೆ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಬ್‌ನ ಒಳಭಾಗದಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ, ಅಲ್ಲಿದ್ದವರು ಪರಿಸ್ಥಿತಿಯನ್ನು ಗಮನಿಸಿ ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಧಾವಿಸಿ, ಶೀಘ್ರವಾಗಿ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.

ಅಗ್ನಿಶಾಮಕ ದಳದ ಸಿಬ್ಬಂದಿಯ ಸಮಯೋಚಿತ ಕಾರ್ಯಾಚರಣೆ ಮತ್ತು ಸ್ಥಳೀಯರ ಜಾಗೃತಿಯಿಂದಾಗಿ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಅದೃಷ್ಟವಶಾತ್, ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಂಭೀರ ಗಾಯಗಳು ಸಂಭವಿಸಿಲ್ಲ. ಅಗ್ನಿ ಅವಘಡದ ನಿಖರ ಕಾರಣದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ, ಆದರೆ ಪ್ರಾಥಮಿಕವಾಗಿ ಚಿಮಣಿ ಅಧಿಕ ಬಿಸಿಯಾಗಿದ್ದೇ ಕಾರಣ ಎಂದು ಹೇಳಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More