ಮನೆ ಮುಂದೆ ವಾಹನ ಪಾರ್ಕಿಂಗ್‌ಗೆ ಶುಲ್ಕ: ಜಿಬಿಎ ನಿಯಮಕ್ಕೆ ಸಿಟಿ ಮಂದಿ ಕಿಡಿ

Updated on: Aug 14, 2026 | 8:22 PM

ಗ್ರೇಟರ್ ಬೆಂಗಳೂರು ಅಥಾರಿಟಿ ಜಾರಿಗೊಳಿಸಿರುವ ಹೊಸ ಪಾರ್ಕಿಂಗ್ ನಿಯಮಗಳು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿವೆ. ಮನೆ ಮುಂದೆ ವಾಹನ ನಿಲ್ಲಿಸಲು ಮಾಸಿಕ 15,000 ಶುಲ್ಕ ವಿಧಿಸುವುದಕ್ಕೆ ನಾಗರಿಕರು ವಿರೋಧ ವ್ಯಕ್ತಪಡಿಸಿದ್ದಾರೆ. ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಇಷ್ಟು ದೊಡ್ಡ ಮೊತ್ತದ ಶುಲ್ಕ ವಿಧಿಸುವುದು ಅವಾಸ್ತವಿಕ ಎಂದು ನಗರವಾಸಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು, ಆಗಸ್ಟ್​​ 14: ಗ್ರೇಟರ್ ಬೆಂಗಳೂರು ಅಥಾರಿಟಿ ಜಾರಿಗೊಳಿಸಿರುವ ಹೊಸ ಪಾರ್ಕಿಂಗ್ ನಿಯಮಗಳು ನಗರದ ವಾಹನ ಸವಾರರಿಗೆ ತೀವ್ರ ಆಘಾತ ಉಂಟು ಮಾಡಿವೆ. ಮನೆ ಮುಂದೆ ವಾಹನ ನಿಲ್ಲಿಸಲು ತಿಂಗಳಿಗೆ 15 ಸಾವಿರ ರೂ ಶುಲ್ಕ ಪಾವತಿಸಿ ಪಾಸ್ ಪಡೆಯಬೇಕೆಂಬ ನಿಯಮಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಗರದಲ್ಲಿ ಬಹುತೇಕ ಸಣ್ಣ ನಿವೇಶನಗಳು ಹಾಗೂ ಬಾಡಿಗೆ ಮನೆಗಳಲ್ಲಿ ಸ್ವಂತ ಪಾರ್ಕಿಂಗ್ ಸ್ಥಳಾವಕಾಶ ಇಲ್ಲದಿರುವಾಗ, ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಏಕಾಏಕಿ ಇಷ್ಟೊಂದು ದುಬಾರಿ ಶುಲ್ಕ ವಿಧಿಸುವುದು ಜನಸಾಮಾನ್ಯರಿಗೆ ಹೊರೆಯಾಗಲಿದೆ ಎಂದು ಜನರು ಕಿಡಿಕಾರಿದ್ದಾರೆ. ಈಗಾಗಲೇ ಪಾಲಿಕೆಗೆ ವಿವಿಧ ತೆರಿಗೆಗಳನ್ನು ಪಾವತಿಸುತ್ತಿದ್ದು, ಜಿಬಿಎ ಮೊದಲು ನಗರದಲ್ಲಿ ವಾಹನ ನಿಲುಗಡೆಗೆ ಸೂಕ್ತ ಪರ್ಯಾಯ ಮೂಲಸೌಕರ್ಯಗಳನ್ನು ರೂಪಿಸಿ, ಆ ಬಳಿಕ ನಾಮಮಾತ್ರದ ದರ ನಿಗದಿಪಡಿಸಬೇಕು ಎಂದು ಸಾರ್ವಜನಿಕರು ಹಾಗೂ ವಾಹನ ಮಾಲೀಕರು ಆಗ್ರಹಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More