ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಬೆಂಗಳೂರಿನ ಹೊಸ ವರ್ಷಾಚರಣೆಗೆ ಗೃಹ ಸಚಿವ ಪರಮೇಶ್ವರ್ ಅವರು ವಿಶೇಷ ಭದ್ರತಾ ಕ್ರಮಗಳ ಬಗ್ಗೆ ತಿಳಿಸಿದ್ದಾರೆ. ಜನರಿಗೆ ಮಾಹಿತಿ ನೀಡಲು ಕ್ಯೂಆರ್ ಕೋಡ್, ಜನಸಂದಣಿ ನಿರ್ವಹಣೆಗೆ ಹೀಟ್ ಮ್ಯಾಪ್ ತಂತ್ರಜ್ಞಾನ, ಮತ್ತು ಸಮಾಜಘಾತುಕ ಶಕ್ತಿಗಳನ್ನು ಗುರುತಿಸಲು ಫೇಶಿಯಲ್ ರೆಕಗ್ನಿಷನ್ ಕ್ಯಾಮರಾಗಳನ್ನು ಬಳಸಲಾಗುತ್ತಿದೆ.
ಬೆಂಗಳೂರು, ಡಿಸೆಂಬರ್ 28: ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಹೊಸ ವರ್ಷಾಚರಣೆಗೆ ಬೆಂಗಳೂರಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕರ ಅನುಕೂಲಕ್ಕಾಗಿ ವಿಶೇಷ ಕ್ಯೂಆರ್ ಕೋಡ್ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಈ ಕ್ಯೂಆರ್ ಕೋಡ್‌ಗಳು ಆಂಬುಲೆನ್ಸ್ ಸೇವೆಗಳು, ವಾಹನ ಪಾರ್ಕಿಂಗ್ ಮತ್ತು ಸಂಚಾರ ಮಾಹಿತಿ ಸೇರಿದಂತೆ ಅಗತ್ಯ ವಿವರಗಳನ್ನು ಒದಗಿಸುತ್ತವೆ. ಪಬ್, ಬಾರ್, ರೆಸ್ಟೋರೆಂಟ್‌ಗಳು ಮತ್ತು ಮಾಲ್‌ಗಳಲ್ಲಿ ಅಳವಡಿಸಲಾಗಿದೆ ಎಂದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
