ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಬಳಿಕ ಡಿಕೆಶಿ ಹೇಳಿದ್ದೇನು?
ಮಾಗಡಿ ರಸ್ತೆಯ ಮಾದಪಟ್ಟಣ ಬಳಿ ಕಲ್ಲು ಕ್ವಾರಿಯಲ್ಲಿ ದುರಂತದಲ್ಲಿ ಏಳು ಜನ ಸಾವನ್ನಪ್ಪಿದ್ದು, ಐದಾರು ಕಾರ್ಮಿಕರು ಗಾಯಗೊಂಡಿದ್ದಾರೆ. ಇನ್ನು ಗಾಯಗೊಂಡಿರುವರನ್ನು ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಇದೀಗ ಸಿಎಂ ಡಿಕೆ ಶಿವಕುಮಾರ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು
ಬೆಂಗಳೂರು, (ಜುಲೈ 02): ಮಾಗಡಿ ರಸ್ತೆಯ ಮಾದಪಟ್ಟಣ ಬಳಿ ಕಲ್ಲು ಕ್ವಾರಿಯಲ್ಲಿ ದುರಂತದಲ್ಲಿ ಏಳು ಜನ ಸಾವನ್ನಪ್ಪಿದ್ದು, ಐದಾರು ಕಾರ್ಮಿಕರು ಗಾಯಗೊಂಡಿದ್ದಾರೆ. ಇನ್ನು ಗಾಯಗೊಂಡಿರುವರನ್ನು ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಇದೀಗ ಸಿಎಂ ಡಿಕೆ ಶಿವಕುಮಾರ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಇದೇ ವೇಳೆ ಮತನಾಡಿದ ಡಿಕೆಶಿ, ಬೆಳಗ್ಗೆ 7ರ ಸುಮಾರಿಗೆ ಘಟನೆ ನಡೆದಿದ್ದು 7 ಜನ ಮೃತಪಟ್ಟಿದ್ದಾರೆ. ಐವರು ಗಾಯಗೊಂಡಿದ್ದಾರೆ, ಒಬ್ಬರ ಸ್ಥಿತಿ ಬಹಳ ಗಂಭೀರವಾಗಿದೆ. ಯಾದಗಿರಿ, ಛತ್ತೀಸ್ಗಢ ಮೂಲದ 7 ಜನರು ಮೃತಪಟ್ಟಿದ್ದಾರೆ. ಮೃತರ ಕುಟುಂಬ ಸದಸ್ಯರ ಜೊತೆ ಅಧಿಕಾರಿಗಳು ಚರ್ಚಿಸಿದ್ದು, ಮೃತದೇಹಗಳನ್ನು ಕಳುಹಿಸಲು ವ್ಯವಸ್ಥೆ ಮಾಡುತ್ತೇವೆ. ಸರ್ಕಾರದ ನಿಯಮಾನುಸಾರ ಪರಿಹಾರ ನೀಡುತ್ತೇವೆ. ಕಲ್ಲು ಕ್ವಾರಿಗಳ ಮಾಲೀಕರ ಜೊತೆ ಅಧಿಕಾರಿಗಳು ಮಾತನಾಡಿದ್ದು, ಮೃತರ ಕುಟುಂಬಗಳಿಗೆ ಮಾಲೀಕರಿಂದಲೂ ಪರಿಹಾರ ಕೊಡಿಸ್ತೇವೆ ಎಂದರು.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್

