ಬೆಂಗಳೂರಿನಲ್ಲಿ ನ್ಯೂಇಯರ್ ಸೆಲೆಬ್ರೇಷನ್ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!
ಹೊಸ ವರ್ಷದ ಸಂಭ್ರಮಾಚರಣೆ ಸಿದ್ಧತೆಗಳಿಗೆ ಬೆಂಗಳೂರಿನ ಯಲಹಂಕದಲ್ಲಿ ಅಕಾಲಿಕ ಮಳೆ ಅಡ್ಡಿಪಡಿಸಿದೆ. ಕಳೆದ ಅರ್ಧ ಗಂಟೆಯಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹೊಸ ವರ್ಷದ ಪಾರ್ಟಿಗಳನ್ನು ಯೋಜಿಸಿದ್ದವರಿಗೆ ನಿರಾಸೆ ಮೂಡಿಸಿದೆ. ಯಲಹಂಕ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಮಳೆಯ ಆರ್ಭಟ ಮುಂದುವರಿದಿದ್ದು, ಜನರು ಮನೆಯಲ್ಲೇ ಉಳಿಯುವಂತಾಗಿದೆ.
ಬೆಂಗಳೂರು, ಡಿಸೆಂಬರ್ 31: 2026ರ ಆಗಮನಕ್ಕೆ ಕ್ಷಣಗಣನೆ ಶುರುವಾಗಿದ್ದು, ರಾಜ್ಯದ ಉದ್ದಗಲಕ್ಕೂ ಸಂಭ್ರಮ ಜೋರಾಗಿದೆ. ಆದರೆ ಇತ್ತ ಸಿಲಿಕಾನ್ ಸಿಟಿಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಮಳೆರಾಯನ ಅಡ್ಡಿ ಉಂಟಾಗಿದೆ. ನಗರದ ಯಲಹಂಕ ಸುತ್ತಮುತ್ತ ಅರ್ಧ ಗಂಟೆಯಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಹೀಗಾಗಿ ಪಾರ್ಟಿ ಮೂಡಲ್ಲಿದ್ದವರು ವರುಣರಾಯನಿಗೆ ಹಿಡಿಶಾಪ ಹಾಕಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

