ಬೆಂಗಳೂರು ಮಳೆ ಅವಾಂತರ: ಸಿಲ್ಕ್ಬೋರ್ಡ್ ಜಂಕ್ಷನ್ನಲ್ಲಿ ರಸ್ತೆಯಲ್ಲಿ ಮೊಣಕಾಲಿನವರೆಗೆ ನೀರು
ಬೆಂಗಳೂರು ನಗರದಲ್ಲಿ ಬೆಳ್ಳಂ ಬೆಳಗ್ಗೆ ಮಳೆರಾಯನ ಆರ್ಭಟ ಜೋರಾಗಿತ್ತು. ಮಳೆಯಿಂದ ನಗರದ ಹಲವಡೆ ಅವಾಂತರ ಸೃಷ್ಟಿಯಾಗಿದೆ. ಮಳೆಯಿಂದಾಗಿ ಸಿಲ್ಕ್ಬೋರ್ಡ್ ಜಂಕ್ಷನ್ನಲ್ಲಿ ರಸ್ತೆ ಸಂಪೂರ್ಣ ಜಲಾವೃತವಾಗಿದೆ. ರಸ್ತೆ ಜಲಾವೃತದಿಂದ ಸಿಲ್ಕ್ಬೋರ್ಡ್ ಜಂಕ್ಷನ್ ಬಳಿ ಟ್ರಾಫಿಕ್ ಜಾಮ್ ಆಗಿದೆ
ಬೆಂಗಳೂರು, ಅಕ್ಟೋಬರ್ 20: ಬೆಂಗಳೂರು ನಗರದಲ್ಲಿ ಬೆಳ್ಳಂ ಬೆಳಗ್ಗೆ ಮಳೆರಾಯನ ಆರ್ಭಟ ಜೋರಾಗಿತ್ತು. ಮಳೆಯಿಂದ ನಗರದ ಹಲವಡೆ ಅವಾಂತರ ಸೃಷ್ಟಿಯಾಗಿದೆ. ಮಳೆಯಿಂದಾಗಿ ಸಿಲ್ಕ್ಬೋರ್ಡ್ ಜಂಕ್ಷನ್ನಲ್ಲಿ ರಸ್ತೆ ಜಲಾವೃತವಾಗಿದೆ. ರಸ್ತೆ ಜಲಾವೃತದಿಂದ ಸಿಲ್ಕ್ಬೋರ್ಡ್ ಜಂಕ್ಷನ್ ಬಳಿ ಟ್ರಾಫಿಕ್ ಜಾಮ್ ಆಗಿದೆ. ಚರಂಡಿಗೆ ಹಾಕಿದ್ದ ಸ್ಲ್ಯಾಬ್ಗಳು ಓಪನ್ ಆಗಿ, ಅದರಿಂದ ನೀರು ಹೊರಬಂದು ಅವಾಂತರ ಸೃಷ್ಟಿಯಾಗಿದೆ. ಇದರಿಂದ ಬೊಮ್ಮನಹಳ್ಳಿಯಿಂದ ಸಿಲ್ಕ್ಬೋರ್ಡ್ವರೆಗೆ ಸಂಚಾರದಲ್ಲಿ ವ್ಯತ್ಯಯವಾಗಿದೆ. ಇದರಿಂದ ವಾಹನ ಸವಾರರ ಪರದಾಡಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Oct 20, 2024 08:22 AM