ರಾಜಾಜಿನಗರದ ESI ಆಸ್ಪತ್ರೆ ಬಳಿ ಮರ ಬಿದ್ದು ಆಟೋಗಳು ಜಖಂ: ಬೆಂಗಳೂರಿನಾದ್ಯಂತ 50ಕ್ಕೂ ಹೆಚ್ಚು ಮರಗಳು ಧರಾಶಾಯಿ
ಬೆಂಗಳೂರಿನಲ್ಲಿ ಭಾರಿ ಗಾಳಿ ಮಳೆಯಿಂದಾಗಿ 50ಕ್ಕೂ ಹೆಚ್ಚು ಮರಗಳು ಉರುಳಿಬಿದ್ದಿವೆ. ರಾಜಾಜಿನಗರದ ಇಎಸ್‌ಐ ಆಸ್ಪತ್ರೆ ಬಳಿ ಮರ ಬಿದ್ದು ಮೂರು ಆಟೋಗಳು ಜಖಂಗೊಂಡಿವೆ. ಬಸವನಗುಡಿ, ವಿದ್ಯಾಪೀಠ ಸರ್ಕಲ್ ಸೇರಿದಂತೆ ಹಲವೆಡೆ ಮರ ಬಿದ್ದು ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದ್ದು, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು, ಏಪ್ರಿಲ್ 30: ಬೆಂಗಳೂರು ನಗರದಲ್ಲಿ ಭಾರಿ ಗಾಳಿ ಮಳೆಯ ಪರಿಣಾಮ ವ್ಯಾಪಕ ಅವಾಂತರಗಳು ಸೃಷ್ಟಿಯಾಗಿವೆ. ನಗರದಾದ್ಯಂತ 50ಕ್ಕೂ ಹೆಚ್ಚು ಬೃಹದಾಕಾರದ ಮರಗಳು ಧರೆಗುರುಳಿವೆ. ರಾಜಾಜಿನಗರದ ಇಎಸ್‌ಐ ಆಸ್ಪತ್ರೆಯ ಪ್ರವೇಶ ದ್ವಾರದ ಬಳಿ ಮರ ಬಿದ್ದು, ಮೂರು ಆಟೋಗಳು ಸಂಪೂರ್ಣವಾಗಿ ಜಖಂಗೊಂಡಿವೆ. ಅದೃಷ್ಟವಶಾತ್, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇದೇ ರೀತಿ, ಬಸವನಗುಡಿಯ ವಿದ್ಯಾಪೀಠ ಸರ್ಕಲ್ ಬಳಿಯೂ ಬೃಹತ್ ಮರ ಬಿದ್ದು ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. ವಿದ್ಯುತ್ ತಂತಿಗಳಿರುವುದರಿಂದ ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ. ರೈಲ್ವೆ ಪ್ಯಾರಲಲ್ ರಸ್ತೆಯಲ್ಲಿ ಭಾರಿ ಗಾತ್ರದ ಮರ ರಸ್ತೆ ಮೇಲೆ ಬಿದ್ದಿದ್ದು ಸಂಚಾರಕ್ಕೆ ಅಡಚಣೆಯಾಗಿದೆ.
ಮರಗಳನ್ನು ತೆರವುಗೊಳಿಸಲು ಅಧಿಕಾರಿಗಳು ಕೂಡಲೇ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾತ್ರಿ ಮರಗಳು ಬಿದ್ದಿದ್ದರೂ ಬೆಳಗ್ಗೆವರೆಗೂ ತೆರವು ಕಾರ್ಯಾಚರಣೆ ವಿಳಂಬವಾಗಿದೆ ಎಂದು ಆರೋಪಿಸಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Apr 30, 2026 07:54 AM
ಸಲಾಲ್ ಡ್ಯಾಂನ ಗೇಟ್ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್:ಪರಿಷ್ಕರಣೆಗೆ ಗಡುವು ವಿಸ್ತರಣೆ

