ಬೆಂಗಳೂರಲ್ಲಿ ಸುರಿದ ಧಾರಾಕಾರ ಮಳೆ: ಬಾರ್ಗೆ ನುಗ್ಗಿದ ನೀರು; ಎಣ್ಣೆ ಖರೀದಿಗೆ ಬಂದ ಮದ್ಯಪ್ರಿಯರು
ಮುಖ್ಯಾಂಶಗಳು
- ಬೆಂಗಳೂರಿನ ಹಲವೆಡೆ ಸುರಿದ ಧಾರಾಕಾರ ಮಳೆ
- ಸರ್ಜಾಪುರ ರಸ್ತೆಯಲ್ಲಿ ವಾಹನ ಸವಾರರು ಪರದಾಟ
- ಬಾರ್ ಒಳಗೆ ನುಗ್ಗಿದ ಮಳೆ ನೀರು
ನಿನ್ನೆ ಬೆಂಗಳೂರಿನ ಹಲವೆಡೆ ಸುರಿದ ಧಾರಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಸರ್ಜಾಪುರ ರಸ್ತೆಯಲ್ಲಿ ನೀರು ನಿಂತು ವಾಹನ ಸವಾರರು ಪರದಾಡಿದರು. ಕೊಡತಿ ಗೇಟ್ ಬಳಿಯ ಬಾರ್ಗೆ ಮಳೆ ನೀರು ನುಗ್ಗಿ ಗ್ರಾಹಕರಿಗೆ ತೊಂದರೆಯಾಯಿತು. ನಿಂತ ನೀರಲ್ಲೂ ಮದ್ಯಪ್ರಿಯರು ಖರೀದಿಗೆ ಮುಂದಾಗಿದ್ದು, ಮಳೆಯ ತೀವ್ರತೆಯನ್ನು ತೋರಿಸುತ್ತದೆ. ನಗರದ ಹಲವು ಭಾಗಗಳಲ್ಲಿ ಇದೇ ರೀತಿಯ ಪರಿಸ್ಥಿತಿ ನಿರ್ಮಾಣವಾಗಿದೆ.
ಬೆಂಗಳೂರು, ನವೆಂಬರ್ 05: ಸ್ವಲ್ಪ ದಿನ ಬಿಡುವು ನೀಡಿದ್ದ ಮಳೆ ಬುಧವಾರ ಧಾರಾಕಾರವಾಗಿ ಸುರಿದಿದೆ. ಜೋರು ಮಳೆಗೆ ಬೆಂಗಳೂರಿನ ಹಲವೆಡೆ ರಸ್ತೆಗಳು ಕೆರೆಯಂತಾಗಿವೆ. ಸರ್ಜಾಪುರ ರಸ್ತೆಯಲ್ಲಿ ನೀರು ನಿಂತ ಹಿನ್ನೆಲೆ ವಾಹನ ಸವಾರರು ಪರದಾಡಿದರು. ಇನ್ನು ಕೊಡತಿ ಗೇಟ್ ಬಳಿಯ ಬಾರ್ಗೆ ಮಳೆ ನೀರು ನುಗ್ಗಿದೆ. ಇದರಿಂದ ಮದ್ಯಪ್ರಿಯರು ಪರದಾಡಿದ್ದು, ಸಾಕಷ್ಟು ಪ್ರಮಾಣದಲ್ಲಿ ನೀರು ನಿಂತಿದ್ದರೂ ಬಂದು ಮದ್ಯ ಖರೀದಿಸುತ್ತಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us