ಹೃದಯಸ್ಪರ್ಶಿ ಘಟನೆ: ಮಳೆಯಲ್ಲಿ ರಸ್ತೆ ದಾಟಲು ಪರದಾಡುತ್ತಿದ್ದ ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವಾಗ, ಬೈಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್‌ಸ್ಟೇಬಲ್ ಅನಿಲ್ ಮಾನವೀಯತೆ ಮೆರೆದಿದ್ದಾರೆ. ರಸ್ತೆ ದಾಟಲು ಪರದಾಡುತ್ತಿದ್ದ ವಿಕಲಚೇತನ ಯುವಕನಿಗೆ ಕೈಹಿಡಿದು ಸುರಕ್ಷಿತವಾಗಿ ರಸ್ತೆ ದಾಟಿಸಿದ್ದಾರೆ. ಈ ಕಾರ್ಯವು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದ್ದು, ಪೊಲೀಸ್ ಸಿಬ್ಬಂದಿಯ ಕರ್ತವ್ಯ ನಿಷ್ಠೆ ಮತ್ತು ಕರುಣೆಯನ್ನು ಎತ್ತಿಹಿಡಿದಿದೆ.
ಬೆಂಗಳೂರು, ಮೇ 29: ಸಿಲಿಕಾನ್ ಸಿಟಿಯಲ್ಲಿ ಸುರಿದ ಧಾರಾಕಾರ ಮಳೆ ಒಂದೆಡೆ ಅವಾಂತರ ಸೃಷ್ಟಿಸುತ್ತಿದ್ದರೆ, ಮತ್ತೊಂದೆಡೆ ಇದೇ ಮಳೆಯ ನಡುವೆ ಬೆಂಗಳೂರು ಪೊಲೀಸರ ಮಾನವೀಯತೆಯ ದರ್ಶನವಾಗಿದೆ. ಮಳೆಯಲ್ಲಿ ರಸ್ತೆ ದಾಟಲು ಪರದಾಡುತ್ತಿದ್ದ ವಿಕಲಚೇತನ ಯುವಕನನ್ನು ಪೊಲೀಸ್ ಕಾನ್ಸ್ಟೇಬಲ್ ಅನಿಲ್ ಹೆಗಲ ಮೇಲೆ ಹೊತ್ತು ರಸ್ತೆ ದಾಟಿಸಿದ್ದಾರೆ. ಆ ಮೂಲಕ ಕರ್ತವ್ಯದ ವೇಳೆ ಮಾನವೀಯತೆ ಮೆರೆದ ಪೊಲೀಸ್ ಸಿಬ್ಬಂದಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳೆಲ್ಲಾ ಜಲಾವೃತಗೊಂಡಿವೆ. ಇಂತಹ ಕಠಿಣ ಪರಿಸ್ಥಿತಿಯಲ್ಲಿ ಸಾರ್ವಜನಿಕರ ರಕ್ಷಣೆಗೆ ನಿಲ್ಲುವ ಪೊಲೀಸರು ತಾವೂ ಕೂಡ ಮಳೆಯಲ್ಲಿ ನೆನೆಯುತ್ತಲೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದರ ನಡುವೆ ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಈ ಘಟನೆ ಅತ್ಯಂತ ಹೃದಯಸ್ಪರ್ಶಿ ಆಗಿದೆ.
ವರದಿ: ಶಿವು
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us