ಬೆಂಗಳೂರಿನಲ್ಲಿ ಮಳೆ ಆರ್ಭಟ: ರಸ್ತೆಯಲ್ಲಿ ನಿಂತ ನೀರು, ವಾಹನ ಸವಾರರ ಪರದಾಟ

|

Updated on: Oct 21, 2024 | 7:50 AM

ಬೆಂಗಳೂರಿನಲ್ಲಿ ನಸುಕಿನಜಾವ ಸುರಿದ ಭಾರಿ ಮಳೆಗೆ ನಗರದ ರಸ್ತೆಗಳಲ್ಲಿ ಮೊಣಕಾಲಿನವರೆಗೂ ನೀರು ನಿಂತಿದೆ. ಇದರಿಂದ ಕಚೇರಿಗಳಿಗೆ ತೆರಳುತ್ತಿದ್ದವರು ಪರದಾಡುವಂತಾಯಿತು. ಪ್ರೀಡಂ ಪಾರ್ಕ್​​ ರಸ್ತೆಯಲ್ಲಿ ಮಳೆ ನೀರು ನಿಂತು ಅವಾಂತರ ಸೃಷ್ಟಿಯಾಗಿದೆ. ವಾಹನ ಸವಾರರು ಪರದಾಡಿದರು. ಹೀಗಾಗಿ ವಾಹನ ಸಂಚಾರ ನಿಧಾನಗತಿಯಿಂದ ಕೂಡಿದೆ.

ಬೆಂಗಳೂರಿನಲ್ಲಿ ಮಧ್ಯರಾತ್ರಿಯಿಂದ ನಸುಕಿನ ಜಾವದವರೆಗೆ ಆರ್ಭಟಿಸಿದ್ದ ವರುಣರಾಯಣ ಈಗ ಕೊಂಚ ಶಾಂತವಾಗಿದ್ದಾನೆ. ನಸುಕಿನಜಾವ ಸುರಿದ ಭಾರಿ ಮಳೆಗೆ ನಗರದ ರಸ್ತೆಗಳಲ್ಲಿ ಮೊಣಕಾಲಿನವರೆಗೂ ನೀರು ನಿಂತಿದೆ. ಇದರಿಂದ ಕಚೇರಿಗಳಿಗೆ ತೆರಳುತ್ತಿದ್ದವರು ಪರದಾಡುವಂತಾಯಿತು. ಬೈಕ್​ ಮತ್ತು ಆಟೋ ಇಂಜಿನ್​ಗಳಲ್ಲಿ ನೀರು ಹೊಕ್ಕು ನಡುರಸ್ತೆ ಬಂದ್​ ಆಗಿ ನಿಂತಿವೆ. ಪ್ರೀಡಂ ಪಾರ್ಕ್​​ ರಸ್ತೆಯಲ್ಲಿ ಮಳೆ ನೀರು ನಿಂತು ಅವಾಂತರ ಸೃಷ್ಟಿಯಾಗಿದೆ. ವಾಹನ ಸವಾರರು ಪರದಾಡಿದರು. ಹೀಗಾಗಿ ವಾಹನ ಸಂಚಾರ ನಿಧಾನಗತಿಯಿಂದ ಕೂಡಿದೆ.