ಬೆಂಗಳೂರಿನಲ್ಲಿ ಮಳೆ ಆರ್ಭಟ; ಜಲಾವೃತವಾದ ಮಾನ್ಯತಾ ಟೆಕ್ಪಾರ್ಕ್ ವಿಡಿಯೋ ವೈರಲ್!
Bangalore Rains: ಭಾರತದ ಪ್ರಮುಖ ಟೆಕ್ ಹಬ್ ಎನಿಸಿಕೊಂಡಿರುವ ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ಇಂದು ಸುರಿದ ಭಾರೀ ಮಳೆಯಿಂದಾಗಿ ಪ್ರವಾಹಪೀಡಿತ ಪ್ರದೇಶದಂತಾಗಿದೆ. 300 ಎಕರೆ ಪ್ರದೇಶದರಲ್ಲಿರುವ ಮಾನ್ಯತಾ ಟೆಕ್ ಪಾರ್ಕ್ ಸಂಪೂರ್ಣ ಜಲಾವೃತವಾಗಿದ್ದು, ಇದರ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ಬೆಂಗಳೂರು: ಇಂದು ಬೆಳಗ್ಗೆಯಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಬೆಂಗಳೂರಿನಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಸತತ ಮಳೆಯಿಂದಾಗಿ 300 ಎಕರೆ ಪ್ರದೇಶದಲ್ಲಿರುವ ಬೆಂಗಳೂರಿನ ಐಟಿ ಹಬ್ ಮಾನ್ಯತಾ ಟೆಕ್ ಪಾರ್ಕ್ ಜಲಾವೃತಗೊಂಡಿರುವ ವಿಡಿಯೋ ವೈರಲ್ ಆಗಿದೆ. ಹೀಗಾಗಿ, ಸೋಷಿಯಲ್ ಮೀಡಿಯಾದಲ್ಲಿ ಮಾನ್ಯತಾ ಟೆಕ್ಪಾರ್ಕ್ ಟ್ರೆಂಡಿಂಗ್ನಲ್ಲಿದೆ. ಮಾನ್ಯತಾ ಟೆಕ್ ಪಾರ್ಕ್‌ಗೆ ಹೋಗುವ ರಸ್ತೆಗಳು ಜಲಾವೃತವಾಗಿವೆ. ನಾಳೆ ಕೂಡ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ:
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Oct 15, 2024 10:22 PM
Latest Videos