ಬೆಂಗಳೂರು: ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು

ಕಿರಣ್ ಹನುಮಂತ್​ ಮಾದಾರ್

Updated on: Oct 05, 2024 | 10:40 PM

ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ಇನ್ನು ರಾಜಕಾಲುವೆ ಮುಚ್ಚಿರುವ ಕಾರಣ ಮನೆಗಳಿಗೆ ಮಳೆ ನೀರು ನುಗ್ಗಿದೆ. ಯಲಹಂಕ ತಾಲೂಕಿನ ಅಟ್ಟೂರು ಗ್ರಾಮದಲ್ಲಿ ಐದಾರು ಮನೆಗಳಿಗೆ ಮಳೆ ನೀರು ನುಗ್ಗಿದ್ದು, ಪರಿಣಾಮ ಮನೆಗಳಲ್ಲಿನ ಗೃಹೋಪಯೋಗಿ ವಸ್ತುಗಳು ಹಾನಿಯಾಗಿದೆ.

ಬೆಂಗಳೂರು, ಅ.05: ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ಇನ್ನು ರಾಜಕಾಲುವೆ ಮುಚ್ಚಿರುವ ಕಾರಣ ಮನೆಗಳಿಗೆ ಮಳೆ ನೀರು ನುಗ್ಗಿದೆ. ಯಲಹಂಕ ತಾಲೂಕಿನ ಅಟ್ಟೂರು ಗ್ರಾಮದಲ್ಲಿ ಐದಾರು ಮನೆಗಳಿಗೆ ಮಳೆ ನೀರು ನುಗ್ಗಿದ್ದು, ಪರಿಣಾಮ ಮನೆಗಳಲ್ಲಿನ ಗೃಹೋಪಯೋಗಿ ವಸ್ತುಗಳು ಹಾನಿಯಾಗಿದೆ. ಮನೆಗಳಲ್ಲಿನ ನೀರು ಹೊರ ಹಾಕಲು ಕುಟುಂಬಸ್ಥರು ಪರದಾಟ ನಡೆಸಿದ್ದಾರೆ. ಪ್ರತಿ ಬಾರಿಯೂ ಭಾರಿ ಮಳೆಯಾದರೆ ಮನೆಗಳಿಗೆ ನೀರು ನುಗ್ಗುತ್ತದೆ. ಆದರೂ, ಸರ್ಕಾರ ಇತ್ತ ಗಮನಹರಿಸಿಲ್ಲ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us