Bengaluru Rains: ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ

Edited By:

Updated on: Sep 30, 2026 | 8:03 AM

ಬೆಂಗಳೂರಿನಲ್ಲಿ ನಿರಂತರ ಮಳೆಯಿಂದಾಗಿ ಕೆ.ಆರ್.ಮಾರ್ಕೆಟ್ ಜಲಾವೃತಗೊಂಡಿದೆ. ಹೂವಿನ ವ್ಯಾಪಾರಿಗಳು ಭಾರಿ ನಷ್ಟ ಅನುಭವಿಸುತ್ತಿದ್ದು, ಗ್ರಾಹಕರ ಸಂಖ್ಯೆಯೂ ಇಳಿಮುಖವಾಗಿದೆ. ನಗರದ ಹಲವು ಪ್ರದೇಶಗಳಲ್ಲಿ ನೀರು ನಿಂತು ಜನಜೀವನ ಅಸ್ತವ್ಯಸ್ತಗೊಂಡಿದೆ. ಕೆ.ಆರ್.ಸರ್ಕಲ್ ಬಳಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಅಪಘಾತಕ್ಕೀಡಾಗಿ, ಚಾಲಕರ ನಡುವೆ ವಾಗ್ವಾದ ನಡೆದಿದೆ.

ಬೆಂಗಳೂರು, ಸೆಪ್ಟೆಂಬರ್ 30: ಬೆಂಗಳೂರಿನಲ್ಲಿ ಮಂಗಳವಾರ ರಾತ್ರಿಯಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಗರದ ಹೃದಯಭಾಗದಲ್ಲಿರುವ ಕೆ.ಆರ್.ಮಾರ್ಕೆಟ್​​ನಲ್ಲಿ ಭಾರಿ ಅವಾಂತರಗಳು ಉಂಟಾಗಿವೆ. ಮಾರುಕಟ್ಟೆಯೊಳಗೆ ನೀರು ನುಗ್ಗಿದ್ದು, ವ್ಯಾಪಾರಿಗಳು ತಮ್ಮ ಸರಕುಗಳನ್ನು ರಕ್ಷಿಸಲು ಪರದಾಡಿದರು. ಅದರಲ್ಲೂ ಹೂವಿನ ವ್ಯಾಪಾರವು ತೀವ್ರ ಸಂಕಷ್ಟಕ್ಕೆ ಸಿಲುಕಿತು. ಮಳೆಯಿಂದಾಗಿ ಗ್ರಾಹಕರ ಸಂಖ್ಯೆ ಗಣನೀಯವಾಗಿ ಇಳಿಮುಖವಾಗಿದ್ದು, ವ್ಯಾಪಾರಿಗಳಿಗೆ ಪ್ರತಿನಿತ್ಯ ಸಾವಿರಾರು ರೂಪಾಯಿ ನಷ್ಟವಾಗುತ್ತಿದೆ. ಮಂಗಳವಾರ ₹3,000 ನಷ್ಟ ಅನುಭವಿಸಿದ್ದೇನೆ ಎಂದು ಹೂವಿನ ವ್ಯಾಪಾರಿಯೊಬ್ಬರು ‘ಟಿವಿ9’ ಜತೆ ಅಳಲು ತೋಡಿಕೊಂಡರು.

ಕೆ.ಆರ್.ಮಾರ್ಕೆಟ್ ಮಾತ್ರವಲ್ಲದೆ, ಶಾಂತಿನಗರ, ರಿಚ್ಮಂಡ್ ಸರ್ಕಲ್, ಕಾರ್ಪೊರೇಷನ್, ಮೆಜೆಸ್ಟಿಕ್, ಚಾಮರಾಜ್‌ಪೇಟೆ ಮತ್ತು ಮಲ್ಲೇಶ್ವರಂ ಸೇರಿದಂತೆ ಹಲವು ಪ್ರದೇಶಗಳಲ್ಲಿ ರಸ್ತೆಗಳು ಕೆರೆಯಂತಾಗಿವೆ. ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದು, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಮಳೆಯ ನಡುವೆ, ಕೆ.ಆರ್.ಸರ್ಕಲ್ ಬಳಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದಿದ್ದು, ಚಾಲಕರ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎಂದು ಆರೋಪಿಸಲಾಗಿದೆ. ಅದೃಷ್ಟವಶಾತ್, ಈ ಅಪಘಾತದಲ್ಲಿ ಯಾರಿಗೂ ಗಾಯಗಳಾಗಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More