Bangalore Rains: ಧಾರಾಕಾರ ಮಳೆಗೆ ವೈಟ್ಫಿಲ್ಡ್, ಮಾರತ್ತಹಳ್ಳಿ, ಔಟರ್ ರಿಂಗ್ ರಸ್ತೆ ಜಲಾವೃತ
ಬೆಂಗಳೂರಿನಲ್ಲಿ ರಾತ್ರಿಯಿಡೀ ಗುಡುಗು ಸಹಿತ ಧಾರಾಕಾರ ಮಳೆ ಸುರಿದಿದೆ. ವೈಟ್ಫೀಲ್ಡ್, ಮಾರತ್ತಹಳ್ಳಿ, ಔಟರ್ರಿಂಗ್ ರಸ್ತೆ ಸುತ್ತಮುತ್ತ ರಸ್ತೆಗಳು ಜಲಾವೃತಗೊಂಡಿವೆ. ಮೆಜೆಸ್ಟಿಕ್, ಕೆ.ಆರ್. ಮಾರುಕಟ್ಟೆ, ಮಲ್ಲೇಶ್ವರಂ ಸೇರಿದಂತೆ ನಗರದ ಹಲವು ಪ್ರಮುಖ ಪ್ರದೇಶಗಳಲ್ಲಿ ಭಾರೀ ಮಳೆಯಾಗಿ, ಜನಜೀವನ ಅಸ್ತವ್ಯಸ್ತಗೊಂಡಿದೆ. ಬೆಂಗಳೂರು ಮಳೆ ಅವಾಂತರದ ವಿಡಿಯೋ ಇಲ್ಲಿದೆ ನೋಡಿ.
ಬೆಂಗಳೂರು, ಸೆಪ್ಟೆಂಬರ್ 29: ಬೆಂಗಳೂರಿನಲ್ಲಿ ರಾತ್ರಿಯಿಡೀ ಗುಡುಗು ಸಹಿತ ಧಾರಾಕಾರ ಮಳೆ ಸುರಿದಿದೆ. ಈ ಭಾರೀ ಮಳೆಯಿಂದಾಗಿ ನಗರದ ಹಲವು ಭಾಗಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನಿರ್ದಿಷ್ಟವಾಗಿ, ವೈಟ್ಫಿಲ್ಡ್, ಮಾರತ್ತಹಳ್ಳಿ, ಔಟರ್ ರಿಂಗ್ ರಸ್ತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆ ದಾಖಲಾಗಿದೆ. ಪರಿಣಾಮವಾಗಿ, ವೈಟ್ಫಿಲ್ಡ್ ಸುತ್ತಮುತ್ತಲಿನ ರಸ್ತೆಗಳು ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ಸಂಚಾರಕ್ಕೆ ತೀವ್ರ ಅಡಚಣೆಯುಂಟಾಗಿದೆ. ಮೆಜೆಸ್ಟಿಕ್, ಕೆ.ಆರ್. ಮಾರುಕಟ್ಟೆ, ಚಾಮರಾಜಪೇಟೆ, ಶಾಂತಿನಗರ, ವಿಜಯನಗರ, ಕೆಂಗೇರಿ, ದೀಪಾಂಜಲಿನಗರ, ರಾಜಾಜಿನಗರ, ಅಂಜನಾಪುರ, ಗೊಟ್ಟಿಗೆರೆ, ಬನಶಂಕರಿ, ಗಿರಿನಗರ, ಮಡಿವಾಳ, ಕೋಣನಕುಂಟೆ, ಆರ್.ಬಿ.ಐ ಲೇಔಟ್, ಕುಮಾರಸ್ವಾಮಿ ಲೇಔಟ್, ರಿಚ್ಮಂಡ್ ಸರ್ಕಲ್, ಎಂ.ಜಿ. ರಸ್ತೆ, ನಂದಿನಿ ಲೇಔಟ್, ಶೇಷಾದ್ರಿಪುರಂ, ಮತ್ತು ಮಲ್ಲೇಶ್ವರಂ ಸೇರಿದಂತೆ ನಗರದ ಬಹುತೇಕ ಪ್ರಮುಖ ಪ್ರದೇಶಗಳಲ್ಲಿ ಭಾರೀ ಮಳೆ ದಾಖಲಾಗಿದೆ.
ಹಲವೆಡೆ ರಸ್ತೆಗಳು ಕೆರೆಗಳಂತೆ ಭಾಸವಾಗುತ್ತಿದ್ದು, ವಾಹನ ಸವಾರರು ಮತ್ತು ಪಾದಚಾರಿಗಳು ತೀವ್ರ ತೊಂದರೆ ಅನುಭವಿಸಿದ್ದಾರೆ. ಏತನ್ಮಧ್ಯೆ ಭಾರತೀಯ ಹವಾಮಾನ ಇಲಾಖೆ ಈಗಾಗಲೇ ಬೆಂಗಳೂರು ಮತ್ತು ದಕ್ಷಿಣ ಒಳನಾಡಿನ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್ ನೀಡಿದೆ. ನಾಗರಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
