ಬೆಂಗಳೂರಿನಲ್ಲಿ ಬುಡಸಮೇತ ರಸ್ತೆ ಮೇಲೆ ಬಿದ್ದ ಬೃಹತ್ ಮರ: ಶಂಕರಮಠ ರಸ್ತೆ ಬಂದ್!
ಬೆಂಗಳೂರಿನ ಶಂಕರಮಠ ರಸ್ತೆಯಲ್ಲಿ ಭಾರೀ ಗಾಳಿ ಮಳೆಯಿಂದ ಬೃಹತ್ ಮರ ಧರೆಗುರುಳಿದೆ. ಇದರಿಂದ ರಸ್ತೆ ಸಂಪೂರ್ಣ ಬಂದ್ ಆಗಿದ್ದು, ಸುಮಾರು 15 BMTC ಬಸ್‌ಗಳು ಸಂಜೆ 7 ಗಂಟೆಯಿಂದ ಸಿಲುಕಿವೆ. ಸಂಚಾರಕ್ಕೆ ಅಡಚಣೆಯಾಗಿದ್ದು, BBMP ಸಿಬ್ಬಂದಿ ಮರ ತೆರವು ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ. ಇದು ನಗರದ ಸಂಚಾರ ವ್ಯವಸ್ಥೆಯ ಮೇಲೆ ತೀವ್ರ ಪರಿಣಾಮ ಬೀರಿದೆ.
ಬೆಂಗಳೂರು, ಮೇ 21: ಭಾರೀ ಗಾಳಿ ಮಳೆಯಿಂದಾಗಿ ನಗರದ ಹಲವೆಡೆ ಬೃಹತ್ ಮರಗಳು ಧರೆಗುರುಳಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಶಂಕರಮಠ ರಸ್ತೆಯಲ್ಲಿ ಬುಡಸಮೇತ ಮರವೊಂದು ಉರುಳಿಬಿದ್ದಿದೆ. ಅದೃಷ್ಟವಶಾತ್ ಮರ ಬಿಳ್ಳುವ ವೇಳೆ ರಸ್ತೆ ಬಹುತೇಕ ಖಾಲಿ ಇದ್ದಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಆದರೆ ಒಂದು ಕಾರು ಮರದ ಕೆಳಗೆ ಸಿಲುಕಿ ಜಖಂಗೊಂಡಿದೆ. ಎರಡು ಭಾಗದ ಸಂಚಾರ ಸಂಪೂರ್ಣ ಬಂದ್ ಆಗಿದೆ. ಸದ್ಯ ಜಿಬಿಎ ಸಿಬ್ಬಂದಿ ಮರ ತೆರವು ಕಾರ್ಯಾಚರಣೆ ನಡೆಸುತ್ತಿದ್ದು, ಇನ್ನೂ ಒಂದು ಗಂಟೆಗೂ ಹೆಚ್ಚು ಕಾಲ ಬೇಕಾಗಲಿದೆ. ಇದೇ ವೇಳೆ ವೆಸ್ಟ್ ಆಫ್ ಕಾರ್ಡ್ ರಸ್ತೆಯ ಸಿಟಿ ಆಸ್ಪತ್ರೆ ಬಳಿ ಫ್ಲೈಓವರ್ ಮೇಲೆ ಬೃಹತ್ ಮರ ಬಿದ್ದು ಚಲಿಸುತ್ತಿದ್ದ ಎರಡು ಕಾರುಗಳು ಜಖಂಗೊಂಡಿವೆ. ಕಾರಿನಲ್ಲಿದ್ದವರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಮೆಜೆಸ್ಟಿಕ್ ಕಡೆಗೆ ಹೋಗುವ ರಸ್ತೆ ಬಂದ್ ಆಗಿದ್ದು, ರಾಜಿನಗರ ಪೊಲೀಸರು ಮತ್ತು ಜಿಬಿಎ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.


