Bengaluru Rains: ಓಕಳೀಪುರ ರೈಲ್ವೆ ಅಂಡರ್ಪಾಸ್, ಪ್ಯಾಲೇಸ್ ರೋಡ್ನಲ್ಲಿ ನೀರು ನಿಂತು ಜನರ ಪರದಾಟ
ಬೆಂಗಳೂರಿನಲ್ಲಿ ಸೋಮವಾರ ತಡರಾತ್ರಿಯಿಂದಲೇ ಸುರಿಯುತ್ತಿರುವ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ನಗರದ ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿದೆ. ಈ ಮಧ್ಯೆ, ಓಕಳೀಪುರ ಅಂಡರ್ ಪಾಸ್ ಕೆರೆಯಂತಾಗಿದ್ದು, ವಾಹನ ಸವಾರರು ಚಾಲನೆ ಮಾಡಲು ಸಂಕಷ್ಟಪಡುವಂತಾಯಿತು. ಅಂಡರ್ ಪಾಸ್ ಅವ್ಯವಸ್ಥೆಯ ವಿಡಿಯೋ ಇಲ್ಲಿದೆ ನೋಡಿ.
ಬೆಂಗಳೂರು, ಅಕ್ಟೋಬರ್ 15: ಬೆಂಗಳೂರಿನಲ್ಲಿ ಮಂಗಳವಾರ ಬೆಳಗ್ಗೆ ಭಾರಿ ಮಳೆ ಸುರಿದಿದೆ. ನಂತರ ಜಿಟಿಜಿಟಿ ಸುರಿಯುತ್ತಿರುವ ಮಳೆಯಿಂದಾಗಿ ಕೆಆರ್ ಮಾರುಕಟ್ಟೆ ಸೇರಿದಂತೆ ಅನೇಕ ಕಡೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ನಗರದ ಓಕಳೀಪುರ ಅಂಡರ್ ಪಾಸ್ನಲ್ಲಿ ನೀರು ತುಂಬಿದ್ದು, ಕೆರೆಯಂತಾಗಿದೆ. ಅಂಡರ್ ಪಾಸ್ ಪೂರ್ತಿ ಮಳೆ ನೀರು ತುಂಬಿದ್ದು, ವಾಹನ ಸವಾರರು ಚಾಲನೆಗೆ ಹರಸಾಹಸಪಡುವಂತಾಗಿದೆ.
ಅಂಡರ್ ಪಾಸ್ನಲ್ಲಿ ನೀರು ನಿಂತಿರುವ ಕಾರಣ ವಾಹನಗಳು ಟ್ರಾಫಿಕ್ ಜಾಮ್ನಲ್ಲಿ ಸಿಲುಕಿ ಪರದಾಟಪಡುವಂತಾಯಿತು. ಕಿಲೋಮೀಟರ್ಗಟ್ಟಲೇ ಟ್ರಾಫಿಕ್ ಜಾಮ್ ಕೂಡ ಉಂಟಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos