AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rains: ಇಂದೂ ಬೆಂಗಳೂರಿನಲ್ಲಿ ವರುಣನ ಆರ್ಭಟ; ಕೆರೆಯಂತಾದ ರಸ್ತೆಗಳು!

Bengaluru Rains: ಇಂದೂ ಬೆಂಗಳೂರಿನಲ್ಲಿ ವರುಣನ ಆರ್ಭಟ; ಕೆರೆಯಂತಾದ ರಸ್ತೆಗಳು!

ಭಾವನಾ ಹೆಗಡೆ
|

Updated on:Sep 30, 2026 | 7:31 AM

Share

ಬೆಂಗಳೂರಿನಾದ್ಯಂತ ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಶಾಂತಿನಗರ, ರಿಚ್ಮಂಡ್ ಸರ್ಕಲ್, ಕಾರ್ಪೊರೇಷನ್, ಮೆಜೆಸ್ಟಿಕ್, ಕೆ.ಆರ್. ಮಾರುಕಟ್ಟೆ, ಚಾಮರಾಜಪೇಟೆ ಮತ್ತು ಮಲ್ಲೇಶ್ವರಂ ಸೇರಿದಂತೆ ಹಲವೆಡೆ ರಸ್ತೆಗಳು ಜಲಾವೃತಗೊಂಡಿವೆ. ವರುಣನ ಆರ್ಭಟಕ್ಕೆ ರಾಜಧಾನಿಯ ರಸ್ತೆಗಳು ಕೆರೆಯಂತೆ ಭಾಸವಾಗುತ್ತಿದ್ದು, ಜನಜೀವನಕ್ಕೆ ತೊಂದರೆಯಾಗಿದೆ. ಜಲಾವೃತಗೊಂಡ ರಸ್ತೆಗಳಿಂದಾಗಿ ನಗರದಲ್ಲಿ ಜನಜೀವನಕ್ಕೆ ಅಡ್ಡಿಯಾಗಿದೆ.

ಬೆಂಗಳೂರು, ಸೆಪ್ಟೆಂಬರ್ 30: ಬೆಂಗಳೂರು ನಗರದಲ್ಲಿ ಮಳೆಯ ಆರ್ಭಟ ಮತ್ತೆ ಮುಂದುವರಿದಿದೆ. ಕಳೆದ ಎರಡು ಮೂರು ದಿನಗಳಿಂದ ಬಿಟ್ಟು ಬಿಡದೆ ರಾಜಧಾನಿಯ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿದೆ. ಶಾಂತಿನಗರ, ರಿಚ್ಮಂಡ್ ಸರ್ಕಲ್, ಕಾರ್ಪೊರೇಷನ್, ಮೆಜೆಸ್ಟಿಕ್, ಕೆ.ಆರ್. ಮಾರುಕಟ್ಟೆ, ಚಾಮರಾಜಪೇಟೆ ಮತ್ತು ಮಲ್ಲೇಶ್ವರಂ ಸೇರಿದಂತೆ ಹಲವು ಪ್ರಮುಖ ಪ್ರದೇಶಗಳಲ್ಲಿ ಭಾರಿ ಮಳೆ ದಾಖಲಾಗಿದೆ. ಈ ನಿರಂತರ ಮಳೆಯ ಕಾರಣದಿಂದಾಗಿ ನಗರದ ರಸ್ತೆಗಳೆಲ್ಲವೂ ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ಕೆರೆಗಳಂತೆ ಭಾಸವಾಗುತ್ತಿವೆ.

ಮಳೆರಾಯನ ಆರ್ಭಟಕ್ಕೆ ವಾಹನ ಸವಾರರು ಮತ್ತು ಸಾರ್ವಜನಿಕರು ತೀವ್ರ ತೊಂದರೆ ಎದುರಿಸುತ್ತಿದ್ದಾರೆ. ಹಲವು ರಸ್ತೆಗಳಲ್ಲಿ ನೀರು ನಿಂತು ಸಂಚಾರ ಅಸ್ತವ್ಯಸ್ತಗೊಂಡಿದೆ. ಬೆಂಗಳೂರಿನಾದ್ಯಂತ ಮಳೆಯ ಈ ಪರಿಸ್ಥಿತಿ ಮುಂದುವರಿದಿದ್ದು, ಜಲಾವೃತಗೊಂಡ ರಸ್ತೆಗಳಿಂದಾಗಿ ನಗರದಲ್ಲಿ ಜನಜೀವನಕ್ಕೆ ಅಡ್ಡಿಯಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Sep 30, 2026 07:30 AM

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More