ಬೆಂಗಳೂರು: ರಾತ್ರಿಯಾಗುತ್ತಿದ್ದಂತೆ ಗುಡುಗು, ಸಿಡಿಲು ಸಹಿತ ಮಳೆ
ಬೆಂಗಳೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಬೆಂಗಳೂರಿನ ಕಮರ್ಷಿಯಲ್ ಸ್ಟ್ರೀಟ್, ರೆಸಿಡೆನ್ಸಿ ರಸ್ತೆಗಳಲ್ಲಿ ಸಂಚಾರ ಅಡ್ಡಿಯಾಗಿದ್ದು, ವಾಹನ ಸವಾರರು ಪರದಾಡಿದ್ದಾರೆ. ರಾಮನಗರದಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆ ಸುರಿದಿದ್ದು, ಹಲವು ಪ್ರದೇಶಗಳಲ್ಲಿ ನೀರು ನಿಂತಿದೆ. ವಿಡಿಯೋ ನೋಡಿ.
ಬೆಂಗಳೂರು, ಅಕ್ಟೋಬರ್ 10: ನಗರದಲ್ಲಿ ರಾತ್ರಿಯಾಗುತ್ತಿದ್ದಂತೆ ಮಳೆ ಆರಂಭವಾಗಿದೆ. ಕಮರ್ಷಿಯಲ್ ಸ್ಟ್ರೀಟ್, ರೆಸಿಡೆನ್ಸಿ ರಸ್ತೆ ಸೇರಿ ಹಲವೆಡೆ ಮಳೆ ಸುರಿದಿದೆ. ಇನ್ನು ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲೂ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆ ಸುರಿದಿದೆ. ಕಳೆದ 15 ನಿಮಿಷಗಳಿಂದ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತವಾಗಿದ್ದು, ಪಾದಚಾರಿಗಳು ಹೈರಾಣಾಗಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

