ರಾಮೇಶ್ವರಂ ಕೆಫೆ ಬಾಂಬ್​ ಸ್ಫೋಟ ಕೇಸ್​: ಬಿಜೆಪಿ ಕಾರ್ಯಕರ್ತ ಸಾಯಿ ಪ್ರಸಾದ್​ ಹೇಳಿದ್ದಿಷ್ಟು

| Updated By: ಗಂಗಾಧರ​ ಬ. ಸಾಬೋಜಿ

Updated on: Apr 06, 2024 | 2:43 PM

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತ ಸಾಯಿ ಪ್ರಸಾದ್​ನನ್ನು ನಿನ್ನೆ ಎನ್​​ಐಎ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದರು. ಈ ಕುರಿತಾಗಿ ಮಾತನಾಡಿರುವ ಸಾಯಿ ಪ್ರಸಾದ್, ನನ್ನನ್ನು ಪ್ರಕರಣದಲ್ಲಿ ಸಾಕ್ಷಿ ಆಗಿ ಪರಿಗಣಿಸಿದ್ದಾರೆ ಎಂದಿದ್ದಾರೆ.

ಶಿವಮೊಗ್ಗ, ಏಪ್ರಿಲ್​ 06: ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್​ ಸ್ಫೋಟ ಪ್ರಕರಣಕ್ಕೆ (Bengaluru Rameshwaram cafe blast Case) ಸಂಬಂಧಿಸಿದಂತೆ ನಿನ್ನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತ ಸಾಯಿ ಪ್ರಸಾದ್​​ನನ್ನು ಎನ್​​ಐಎ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ಮಾಡಿ ಬಿಟ್ಟಕಳುಹಿಸಿದ್ದರು. ತನಿಖೆ ಕುರಿತಾಗಿ ಮಾತನಾಡಿರುವ ಬಿಜೆಪಿ ಕಾರ್ಯಕರ್ತ ಸಾಯಿ ಪ್ರಸಾದ್​, ವಿಚಾರಣೆಗೆಂದು ಬೆಂಗಳೂರಿಗೆ ಕಳೆದುಕೊಂಡು ಹೋಗಿದ್ದರು. ನನ್ನನ್ನು ಪ್ರಕರಣದಲ್ಲಿ ಸಾಕ್ಷಿ ಆಗಿ ಪರಿಗಣಿಸಿದ್ದಾರೆ. ಆದರೆ ನನ್ನ ಬಂಧನ ಕುರಿತು ಅಪಪ್ರಚಾರ ಮಾಡಲಾಗಿತ್ತು ಎಂದು ಹೇಳಿದ್ದಾರೆ. ನಿನ್ನೆ ಇದೇ ವಿಚಾರವಾಗಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಕೂಡ ಮಾತನಾಡಿದ್ದು, ಸ್ಪಷ್ಟನೆ ನೀಡಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.   

Published on: Apr 06, 2024 02:42 PM