ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ: ಖಾಕಿ ಪಡೆ ಅಲರ್ಟ್, ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಬಿಗಿಭದ್ರತೆ
ಇಂದು ವುಮೆನ್ಸ್ ಪ್ರೀಮಿಯರ್ ಲೀಗ್ನ (WPL 2024) 9ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಮುಂಬೈ ಇಂಡಿಯನ್ಸ್ (MI) ತಂಡಗಳು ಮುಖಾಮುಖಿಯಾಗಲಿದೆ. ಅದರಲ್ಲಿಯೂ ಪಂದ್ಯ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಹಾಗಾಗಿ ಸ್ಟೇಡಿಯಂ ಮುಖ್ಯದ್ವಾರ, ರಸ್ತೆ ಅಕ್ಕಪಕ್ಕದಲ್ಲಿ ಪೊಲೀಸರು ಬೀಡುಬಿಟ್ಟಿದ್ದು, ಬಿಗಿಭದ್ರತೆ ಒದಗಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ.
ಬೆಂಗಳೂರು, ಮಾರ್ಚ್ 2: ನಗರದ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ (Rameshwaram Cafe blast) ಹಿನ್ನೆಲೆ ಬೆಂಗಳೂರಲ್ಲಿ ಎಲ್ಲೆಡೆ ಪೊಲೀಸ್ ಪಡೆ ಅಲರ್ಟ್ ಆಗಿದೆ. ಇಂದು ವುಮೆನ್ಸ್ ಪ್ರೀಮಿಯರ್ ಲೀಗ್ನ (WPL 2024) 9ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಮುಂಬೈ ಇಂಡಿಯನ್ಸ್ (MI) ತಂಡಗಳು ಮುಖಾಮುಖಿಯಾಗಲಿದೆ. ಅದರಲ್ಲಿಯೂ ಪಂದ್ಯ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಹಾಗಾಗಿ ಸ್ಟೇಡಿಯಂ ಮುಖ್ಯದ್ವಾರ, ರಸ್ತೆ ಅಕ್ಕಪಕ್ಕದಲ್ಲಿ ಪೊಲೀಸರು ಬೀಡುಬಿಟ್ಟಿದ್ದು, ಬಿಗಿಭದ್ರತೆ ಒದಗಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದ್ದು, ಮೈದಾನದ ಸುತ್ತಮುತ್ತ ಪೊಲೀಸರು ನಿಗಾ ಇಟ್ಟಿದ್ದಾರೆ. ರಾಜ್ಯದ ಎಲ್ಲಾ ರೈಲ್ವೆ ನಿಲ್ದಾಣಗಳಲ್ಲೂ ನಿಗಾ ಇಡಲು ಸೂಚನೆ ನೀಡಲಾಗಿದೆ. ರೈಲ್ವೆ ನಿಲ್ದಾಣಗಳಲ್ಲಿ ಭದ್ರತೆಗೆ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದ್ದು, ಅನುಮಾನಾಸ್ಪದ ವಸ್ತುಗಳು ಕಂಡುಬಂದರೆ ಅಗತ್ಯ ಕ್ರಮಕ್ಕೆ ಸೂಚಿಸಲಾಗಿದೆ. ಮೆಜೆಸ್ಟಿಕ್‌ನ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಗಳಲ್ಲಿಯೂ ಖಾಕಿ ಪಡೆ ಅಲರ್ಟ್ ಆಗಿದ್ದು, ಪ್ರಯಾಣಿಕರ ಲಗೇಜ್ ಚೆಕ್ ಮಾಡಿ ನಿಲ್ದಾಣಕ್ಕೆ ಬಿಡುತ್ತಿದ್ದಾರೆ.
ವರದಿ: ಶಾಂತಮೂರ್ತಿ ಎಂ
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.