ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟ ಶಂಕಿತನ ಚಲನವಲನ ಸೆರೆ
ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಸಿಸಿಟಿವಿಯಲ್ಲಿ ಶಂಕಿತ ಆರೋಪಿಯ ಚಹರೆ, ಚಲನವಲನ ದೃಶ್ಯ ಸೆರೆಯಾಗಿದೆ. ಘಟನಾ ಸ್ಥಳದ ಬಳಿಯ ಸಿಸಿಟಿವಿಯಲ್ಲಿ ಆರೋಪಿಯ ಚಲನವಲನ ದೃಶ್ಯ ಸೆರೆಯಾಗಿದ್ದು ಆರೋಪಿಯ ಗುರುತು ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿದಿದೆ. ಸದ್ಯ ಈ ಹಿಂದೆ UAPA ಪ್ರಕರಣದಲ್ಲಿ ಭಾಗಿಯಾಗಿದ್ದ ಹಾಗೂ ಪ್ರಕರಣದ ಆರೋಪಿಗಳ ಜೊತೆ ಸಂಪರ್ಕದಲ್ಲಿದ್ದವರ ವಿಚಾರಣೆ ನಡೆಸಲಾಗುತ್ತಿದೆ.
ಬೆಂಗಳೂರು, ಮಾರ್ಚ್.02: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಸಿಸಿಟಿವಿಯಲ್ಲಿ ಶಂಕಿತ ಆರೋಪಿಯ ಚಹರೆ, ಚಲನವಲನ ದೃಶ್ಯ ಸೆರೆಯಾಗಿದೆ. ತಲೆ ಮೇಲೆ ಹ್ಯಾಟ್ ಹಾಕಿಕೊಂಡಿರುವ ಶಂಕಿತ ವ್ಯಕ್ತಿಯಿಂದ ಬಾಂಬ್? ಇಡಲಾಗಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಆರೋಪಿ ಹಾಕಿರುವ ಬಿಳಿ ಬಣ್ಣದ ಹ್ಯಾಟ್ ಮೇಲೆ ನಂಬರ್ 10 ಎಂದು ನಮೂದಿಸಲಾಗಿದೆ. ಸದ್ಯ ಆರೋಪಿಗಾಗಿ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.
ಆರೋಪಿ ಕಪ್ಪು ಬಣ್ಣದ ಮಾಸ್ಕ್ ಹಾಕಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆರೋಪಿ ಕಪ್ಪು ಬಣ್ಣದ ಬ್ಯಾಗ್ ಜೊತೆ ರಾಮೇಶ್ವರಂ ಕೆಫೆಗೆ ಬಂದಿದ್ದ. ಕೆಫೆಯಲ್ಲಿ ತಿಂಡಿಯ ಪ್ಲೇಟ್ ಹಿಡಿದು ಓಡಾಡಿರುವ ದೃಶ್ಯ ಸೆರೆಯಾಗಿದೆ. ಹೋಗುತ್ತಾ ವಾಚ್ನಲ್ಲಿ ಟೈಂ ನೋಡಿ ಹೋಗಿದ್ದು ಕೆಫೆಯಿಂದ ಹೊರಗೆ ಬಂದು ಎಡಭಾಗಕ್ಕೆ ಹೋಗಿದ್ದಾನೆ. ಶಂಕಿತ ಆರೋಪಿಯ ಚಲನವಲನ ಸೆರೆಯಾಗಿರುವ ಸಿಸಿಟಿವಿ ಲಭ್ಯವಾಗಿದೆ.
ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ
Latest Videos