ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟ ಶಂಕಿತನ ಚಲನವಲನ ಸೆರೆ

| Updated By: ಆಯೇಷಾ ಬಾನು

Updated on: Mar 02, 2024 | 9:00 AM

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಸಿಸಿಟಿವಿಯಲ್ಲಿ ಶಂಕಿತ ಆರೋಪಿಯ ಚಹರೆ, ಚಲನವಲನ ದೃಶ್ಯ ಸೆರೆಯಾಗಿದೆ. ಘಟನಾ ಸ್ಥಳದ ಬಳಿಯ ಸಿಸಿಟಿವಿಯಲ್ಲಿ ಆರೋಪಿಯ ಚಲನವಲನ ದೃಶ್ಯ ಸೆರೆಯಾಗಿದ್ದು ಆರೋಪಿಯ ಗುರುತು ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿದಿದೆ. ಸದ್ಯ ಈ ಹಿಂದೆ UAPA ಪ್ರಕರಣದಲ್ಲಿ ಭಾಗಿಯಾಗಿದ್ದ ಹಾಗೂ ಪ್ರಕರಣದ ಆರೋಪಿಗಳ ಜೊತೆ ಸಂಪರ್ಕದಲ್ಲಿದ್ದವರ ವಿಚಾರಣೆ ನಡೆಸಲಾಗುತ್ತಿದೆ.

ಬೆಂಗಳೂರು, ಮಾರ್ಚ್.02: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಸಿಸಿಟಿವಿಯಲ್ಲಿ ಶಂಕಿತ ಆರೋಪಿಯ ಚಹರೆ, ಚಲನವಲನ ದೃಶ್ಯ ಸೆರೆಯಾಗಿದೆ. ತಲೆ ಮೇಲೆ ಹ್ಯಾಟ್​​​​ ಹಾಕಿಕೊಂಡಿರುವ ಶಂಕಿತ ವ್ಯಕ್ತಿಯಿಂದ ಬಾಂಬ್​​​? ಇಡಲಾಗಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಆರೋಪಿ ಹಾಕಿರುವ ಬಿಳಿ ಬಣ್ಣದ ಹ್ಯಾಟ್​​ ಮೇಲೆ ನಂಬರ್ 10 ಎಂದು ನಮೂದಿಸಲಾಗಿದೆ. ಸದ್ಯ ಆರೋಪಿಗಾಗಿ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.

ಆರೋಪಿ ಕಪ್ಪು ಬಣ್ಣದ ಮಾಸ್ಕ್​ ಹಾಕಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆರೋಪಿ ಕಪ್ಪು ಬಣ್ಣದ ಬ್ಯಾಗ್​ ಜೊತೆ ರಾಮೇಶ್ವರಂ ಕೆಫೆ​ಗೆ ಬಂದಿದ್ದ. ಕೆಫೆಯಲ್ಲಿ ತಿಂಡಿಯ ಪ್ಲೇಟ್ ಹಿಡಿದು ಓಡಾಡಿರುವ ದೃಶ್ಯ ಸೆರೆಯಾಗಿದೆ. ಹೋಗುತ್ತಾ ವಾಚ್​ನಲ್ಲಿ ಟೈಂ ನೋಡಿ ಹೋಗಿದ್ದು ಕೆಫೆಯಿಂದ ಹೊರಗೆ ಬಂದು ಎಡಭಾಗಕ್ಕೆ ಹೋಗಿದ್ದಾನೆ. ಶಂಕಿತ ಆರೋಪಿಯ ಚಲನವಲನ ಸೆರೆಯಾಗಿರುವ ಸಿಸಿಟಿವಿ ಲಭ್ಯವಾಗಿದೆ.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow us on