ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಮೇನಿಯಾ: ಹೆಜ್ಜೆ ಹೆಜ್ಜೆಗೂ ಪೊಲೀಸ್​ ಸರ್ಪಗಾವಲು

Edited By:

Updated on: Aug 10, 2025 | 9:53 AM

ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರು ಭೇಟಿಯ ಹಿನ್ನೆಲೆಯಲ್ಲಿ ಮೆಜೆಸ್ಟಿಕ್‌ನ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ವೃತ್ತವನ್ನು ಬಣ್ಣ ಬಣ್ಣದ ದೀಪಗಳಿಂದ ಅಲಂಕರಿಸಲಾಗಿದೆ. ಮೋದಿ ಅವರ ಅಭಿಮಾನಿಗಳು ಕೇಸರಿ ಶಾಲು ಧರಿಸಿ ಅವರ ಆಗಮನಕ್ಕಾಗಿ ಕಾಯುತ್ತಿದ್ದಾರೆ. ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ವಿಡಿಯೋ ನೋಡಿ.

ಬೆಂಗಳೂರು, ಆಗಸ್ಟ್ 10: ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಮನಕ್ಕೆ ಕೌಂಟ್‌ಡೌನ್‌ ಶುರುವಾಗಿದೆ. ಸ್ವಾಗತ ಕೋರಲು ರಾಜಧಾನಿ ಸಜ್ಜಾಗಿದ್ದು, ನಗರದಲ್ಲಿ ಎಲ್ಲೆಡೆ ಮೋದಿ ಮೇನಿಯಾ ಶುರುವಾಗಿದೆ. ಮೋದಿ ಕಟೌಟ್ ಹಿಡಿದು ಕಾರ್ಯಕರ್ತರು ಎಂಟ್ರಿ ಕೊಡುತ್ತಿದ್ದಾರೆ. ಮುಂಜಾಗ್ರತ ಕ್ರಮವಾಗಿ ಪೊಲೀಸ್​ ಭದ್ರತೆ ಒದಗಿಸಲಾಗಿದೆ. ಇತ್ತ ಮೆಜೆಸ್ಟಿಕ್ ಸುತ್ತಮುತ್ತ ಹೆಜ್ಜೆ ಹೆಜ್ಜೆಗೂ ಪೊಲೀಸ್​ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.