AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಲೇಡಿ ಡಾನ್ ಹಾವಳಿ? ರಿಯಲ್ ಎಸ್ಟೇಟ್ ಉದ್ಯಮಿ ಕಚೇರಿಗೆ ನುಗ್ಗಿ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಮಹಿಳೆ

ಬೆಂಗಳೂರಲ್ಲಿ ಲೇಡಿ ಡಾನ್ ಹಾವಳಿ? ರಿಯಲ್ ಎಸ್ಟೇಟ್ ಉದ್ಯಮಿ ಕಚೇರಿಗೆ ನುಗ್ಗಿ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಮಹಿಳೆ

ರಾಚಪ್ಪಾಜಿ ನಾಯ್ಕ್
| Edited By: |

Updated on:May 18, 2026 | 2:32 PM

Share

ಬೆಂಗಳೂರಿನ ಕೊಡಿಗೆಹಳ್ಳಿಯಲ್ಲಿ ತಾನು ಸಂಘಟನೆಯೊಂದರ ಮುಖ್ಯಸ್ಥೆ ಎಂದು ಹೇಳಿಕೊಂಡು ಸಂಗೀತ ರಾಮ್ ಎಂಬ ಮಹಿಳೆ ಇಬ್ಬರು ಸಹಚರರೊಂದಿಗೆ ರಿಯಲ್ ಎಸ್ಟೇಟ್ ಉದ್ಯಮಿ ವೆಂಕಟರಾಜು ಕಚೇರಿಗೆ ನುಗ್ಗಿ ಜೀವ ಬೆದರಿಕೆ ಹಾಕಿದ್ದಾಳೆ. ಸೈಟ್ ವಿವಾದಕ್ಕೆ ಸಂಬಂಧಿಸಿ 10 ಲಕ್ಷ ರೂ. ಹಫ್ತಾ ಕೇಳಿರುವ ಬಗ್ಗೆ ಆಕೆಯ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಂಗಳೂರು, ಮೇ 18: ಮಹಿಳೆಯೊಬ್ಬಳು ತಾನು ಸಂಘಟನೆಯೊಂದರ ಪ್ರಮುಖ ನಾಯಕಿ ಎಂದು ಹೇಳಿಕೊಂಡು ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಕಚೇರಿಗೆ ನುಗ್ಗಿ, ಜೀವ ಬೆದರಿಕೆ ಹಾಕಿ ಭಾರಿ ಮೊತ್ತದ ಹಣಕ್ಕೆ ಬೇಡಿಕೆ ಇಟ್ಟಿರುವ ಆಘಾತಕಾರಿ ಘಟನೆ ಬೆಂಗಳೂರಿನ ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಂಗೀತ ರಾಮ್ ಎಂಬ ಮಹಿಳೆ ಹಾಗೂ ಆಕೆಯೊಂದಿಗೆ ಬಂದಿದ್ದ ಇಬ್ಬರು ಪುರುಷರು ಸೇರಿ ರಿಯಲ್ ಎಸ್ಟೇಟ್ ಉದ್ಯಮಿ ವೆಂಕಟರಾಜು ಅವರಿಗೆ ಈ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಕೊಡಿಗೆಹಳ್ಳಿ ವ್ಯಾಪ್ತಿಯಲ್ಲಿರುವ ವೆಂಕಟರಾಜು ಅವರ ಕಚೇರಿಗೆ ನುಗ್ಗಿದ ಸಂಗೀತ ರಾಮ್, ತಾನು ಸಂಘಟನೆಯೊಂದರ ಯುವಸೇನೆಯ ಮುಖ್ಯಸ್ಥೆ ಹಾಗೂ ಮಹಿಳಾ ಸಂಘದ ಅಧ್ಯಕ್ಷೆ ಎಂದು ಹೇಳಿಕೊಂಡು ಧಮ್ಕಿ ಹಾಕಿದ್ದಾಳೆ ಎಂದು ಆರೋಪಿಸಲಾಗಿದೆ. ಶಿವಾಜಿನಗರದಲ್ಲಿರುವ ಸೈಟ್‌ ಒಂದನ್ನು ವೆಂಕಟರಾಜು ಅವರು ರಿಜಿಸ್ಟರ್ಡ್ ಅಗ್ರಿಮೆಂಟ್ ಮಾಡಿಸಿಕೊಂಡಿದ್ದರು. ಇದೇ ಜಾಗದ ವಿಚಾರವನ್ನು ಮುಂದಿಟ್ಟುಕೊಂಡು ಕಚೇರಿಯಲ್ಲಿ ರಂಪಾಟ ಮಾಡಿರುವ ಮಹಿಳೆ, ‘ನೀನು ಅಗ್ರಿಮೆಂಟ್ ಮಾಡಿಸಿಕೊಂಡಿದ್ದರೂ ಆ ಜಾಗದ ಕಡೆ ತಲೆಹಾಕಬಾರದು. ನಾವು ನಿನ್ನ ತಂಟೆಗೆ ಬರಬಾರದು ಎಂದರೆ ತಕ್ಷಣ 10 ಲಕ್ಷ ರೂಪಾಯಿ ನೀಡಬೇಕು’ ಎಂದು ಹಫ್ತಾಗೆ ಬೇಡಿಕೆ ಇಟ್ಟಿದ್ದಾಳೆ ಎಂದು ಆರೋಪಿಸಲಾಗಿದೆ.

ಅಲ್ಲದೆ, ಒಂದು ವೇಳೆ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೆ ಕಚೇರಿಗೆ ನುಗ್ಗಿ ಹೊಡೆಯುವುದಾಗಿ ಮತ್ತು 15 ರಿಂದ 20 ಜನರನ್ನು ಕರೆಸಿ ಕೊಲೆ ಮಾಡಿಸುವುದಾಗಿ ದರ್ಪ ತೋರಿದ್ದಾಳೆ ಎಂದು ಉದ್ಯಮಿ ವೆಂಕಟರಾಜು ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದರ ಆಧಾರದಲ್ಲಿ ಕೊಡಿಗೆಹಳ್ಳಿ ಪೊಲೀಸಲು ಪ್ರಕರಣ ದಾಖಲಿಸಿದ್ದು, ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: May 18, 2026 02:32 PM
Follow Us
Rachappaji Naik S
Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More