ಕೆಆರ್​.ಸರ್ಕಲ್​ನ ಅಂಡರ್​ಪಾಸ್​ನಲ್ಲಿ ಮುಳುಗಿದ ಕಾರು, ಮಹಿಳೆಯನ್ನ ರಕ್ಷಿಸಿದ್ದೇ ರೋಚಕ

ಬೆಂಗಳೂರಿನ ಕೆಆರ್​ ಸರ್ಕಲ್​ ಅಂಡರ್​ಪಾಸ್​ನಲ್ಲಿ ಮಳೆ ನೀರಿನಲ್ಲಿ ಕಾರು ಮುಳುಗಿದ್ದು, ಸ್ಥ:ಳೀಯರು, ಪೊಲೀಸರು ಸೇರಿ ಕಾರಿನಲ್ಲಿದ್ದವರನ್ನು ರಕ್ಷಣೆ ಮಾಡಿದ್ದಾರೆ.

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ವರುಣ ಅಬ್ಬರಿಸುತ್ತಿದ್ದು, ಗುಡುಗು, ಆಲಿಕಲ್ಲು ಸಹಿತ ಭಾರಿ ಮಳೆಗೆ (Bengaluru Rain) ಬೆಂಗಳೂರು ಮಂದಿ ಪರದಾಡುವಂತಾಗಿದೆ. ಹಲವು ರಸ್ತೆಗಳಲ್ಲಿ ಮರಗಳು ಬಿದ್ದಿದ್ದು, ಎಲ್ಲೆಡೆ ಟ್ರಾಫಿಕ್ ಜಾಮ್ ಆಗಿದೆ. ಇನ್ನು ಕೆಆರ್​ ಸರ್ಕಲ್​ ಬಳಿರುವ ಅಂಡರ್​ಪಾಸ್​ನಲ್ಲಿ ಕಾರು ನೀರಿನಲ್ಲಿ ಮುಳುಗಿದೆ. ಇನ್ನು ಕಾರಿನಲ್ಲಿದ್ದವರನ್ನು ಸ್ಥಳೀಯರು ಹರಸಾಹಸಪಟ್ಟು ರಕ್ಷಿಸಿದ್ದಾರೆ. ಪೈಕಿ ಓರ್ವ ಮಹಿಳೆ ತೀವ್ರ ಅಸ್ವಸ್ಥಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯ್ತು.

Published On - 4:53 pm, Sun, 21 May 23

Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us