ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ: ವನ್ಯಜೀವಿಗಳ ಹಾವಳಿಯಿಂದ ಹೆಚ್ಚಿದ ಜನರ ಆತಂಕ

Edited By:

Updated on: Sep 29, 2026 | 11:54 AM

ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷವಾಗಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇತ್ತೀಚೆಗೆ ಕಾಡಾನೆಯೊಂದು ದಾಳಿ ಮಾಡಿ ವ್ಯಕ್ತಿಯೊಬ್ಬರನ್ನು ಬಲಿ ಪಡೆದ ಘಟನೆ ಮರೆಯುವ ಮುನ್ನವೇ ಚಿರತೆ ಕಾಣಿಸಿಕೊಂಡಿದೆ. ಮುಂಜಾನೆ ವೇಳೆಗೆ ಚಿರತೆಯ ಓಡಾಟ ಕ್ಯಾಮರಾದಲ್ಲಿ ಸೆರೆಯಾಗಿದೆ. ವನ್ಯಜೀವಿಗಳ ಹಾವಳಿ ಹೆಚ್ಚಾಗುತ್ತಿದ್ದು, ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ನಿವಾಸಿಗಳು ಒತ್ತಾಯಿಸಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್​​ 29: ಅಂಚೆಪಾಳ್ಯ ಪ್ರದೇಶದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿರುವುದು ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ನಿನ್ನೆ ಕಾಡಾನೆಯೊಂದು ನಗರಕ್ಕೆ ಲಗ್ಗೆ ಇಟ್ಟು ವ್ಯಕ್ತಿಯೊಬ್ಬರನ್ನು ಬಲಿ ಪಡೆದ ಘಟನೆ ಬೆನ್ನಲ್ಲೇ ಈಗ ಚಿರತೆ ಕಾಣಿಸಿಕೊಂಡಿರುವುದು ಪರಿಸ್ಥಿತಿಯನ್ನು ಮತ್ತಷ್ಟು ಉದ್ವಿಗ್ನಗೊಳಿಸಿದೆ. ಮುಂಜಾನೆ ಮೂರು ಗಂಟೆ ಸುಮಾರಿಗೆ ಅಂಚೆಪಾಳ್ಯದ ನಿರ್ಜನ ಪ್ರದೇಶವೊಂದರಲ್ಲಿ ಚಿರತೆ ಓಡಾಡುತ್ತಿರುವ ದೃಶ್ಯವನ್ನು ಭದ್ರತಾ ಸಿಬ್ಬಂದಿ ಸೆರೆಹಿಡಿದಿದ್ದಾರೆ. ಆನೆ ಪ್ರತ್ಯಕ್ಷವಾದ ಜಾಗದ ಸಮೀಪದಲ್ಲೇ ಚಿರತೆ ಕೂಡ ಕಾಣಿಸಿಕೊಂಡಿದೆ. ಪದೇ ಪದೇ ವನ್ಯಜೀವಿಗಳು ನಗರದ ಕಡೆ ಬರುತ್ತಿರುವುದು ಅರಣ್ಯ ಇಲಾಖೆಯ ಕಾರ್ಯವೈಖರಿಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಅರುಣ್ ಕುಮಾರ್​ ಆರ್​.

ಅರುಣ್ ಕುಮಾರ್ ಆರ್. ಬೆಂಗಳೂರಿನ ಜ್ಞಾನಭಾರತಿ ವಿವಿಯಲ್ಲಿ ಸಮೂಹ ಸಂವಹನ ಹಾಗೂ ತಂತ್ರಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪ್ರಸ್ತುತ ಟಿವಿ9 ಕನ್ನಡದಲ್ಲಿ ಮೆಟ್ರೋ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಜಿಬಿಎ ಹಾಗೂ ನಗರದ ಅಭಿವೃದ್ಧಿ ಕ್ಷೇತ್ರದಲ್ಲಿ ಒಂದು ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವ ಇವರು, ಒಟ್ಟು 2 ವರ್ಷಗಳ ವರದಿಗಾರಿಕೆ ಅನುಭವದೊಂದಿಗೆ ಜನೋಪಯೋಗಿ ವಿಷಯಗಳ ಕುರಿತು ವರದಿ ಮಾಡುತ್ತಿದ್ದಾರೆ.

Read More