ಬೆಂಗಳೂರು ಮಳೆಗೆ ಜನ ಗಾಬರಿಪಡುವ ಅಗತ್ಯವಿಲ್ಲ, ಅಧಿಕಾರಿಗಳನ್ನು ಡೆಪ್ಯೂಟ್ ಮಾಡಲಾಗಿದೆ: ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ

Updated on: May 20, 2025 | 12:29 PM

ಬಿಜೆಪಿಯವರು ಮಾಡುವ ಟೀಕೆಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲ, ಜನರ ಜೀವ, ಆಸ್ತಿಪಾಸ್ತಿಗಳನ್ನು ರಕ್ಷಿಸಲು ತಮ್ಮ ಸರ್ಕಾರ ಬದ್ಧವಾಗಿದೆ, ಜನ ಏನಾದರೂ ಬಯ್ಯಲಿ, ತಾನು ಮಾತ್ರ ರಾಜ್ಯದಲ್ಲಿ ಇನ್ನೂ ಮಳೆಯಾಗಲಿ, ಮಳೆ ಸುರಿದರೆ ರಾಜ್ಯಕ್ಕೆ ಅನುಕೂಲವಾಗುತ್ತದೆ ಎಂದು ಶಿವಕುಮಾರ್ ಮತ್ತೊಮ್ಮೆ ಹೇಳಿದರು. ನಗರದಲ್ಲಿ ಮಳೆ ಈಗಾಗಲೇ 3 ಜನರನ್ನು ಬಲಿ ಪಡೆದಿದೆ.

ಬೆಂಗಳೂರು, ಮೇ 20: ನಗರದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಜನ ಗಾಬರಿಗೊಳಗಾಗುವ ಅವಶ್ಯಕತೆಯಿಲ್ಲ, ಆಧಿಕಾರಿಗಳನ್ನು ಡೆಪ್ಯೂಟ್ ಮಾಡಲಾಗಿದೆ, ಅವರು ಸಮಸ್ಯೆಗಳನ್ನು ನೋಡಿಕೊಳ್ಳುತ್ತಾರೆ, ತಾನು ಹೊಸಪೇಟೆಯಲ್ಲಿದ್ದವನು ಮಳೆಯ ವಿಷಯ ಗೊತ್ತಾಗುತ್ತಿದ್ದಂತೆಯೇ ಇಲ್ಲಿಗೆ ಧಾವಿಸಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಹೇಳಿದರು. ಸಾಧನಾ ಸಮಾವೇಶಕ್ಕೆ ಹೊರಡುವ ತರಾತುರಿಯಲ್ಲಿದ್ದ ಅವರು, ಹೊಸಪೇಟೆಯಿಂದ ವಾಪಸ್ಸು ಬಂದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ನಗರದಲ್ಲಿ ಮಳೆಯಿಂದ ಪ್ರಭಾವಿತ ಕೆಲ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ ಮತ್ತು ತಾನೂ ಸಹ ಹಲವು ಏರಿಯಾಗಳಿಗೆ ಭೇಟಿ ನೀಡೋದಾಗಿ ಶಿವಕುಮಾರ್ ಹೇಳಿದರು.

ಇದನ್ನೂ ಓದಿ:   ಗ್ರೇಟರ್ ಬೆಂಗಳೂರು ಡಿಕೆ ಶಿವಕುಮಾರ್ ಕಲ್ಪನೆಯ ಕೂಸು, ಬೆಂಗಳೂರಲ್ಲಿ ವಿನೂತನ ಪ್ರಯೋಗ: ಜಿ ಪರಮೇಶ್ವರ್

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.