FIFA World cup Craze: ಬೆಂಗಳೂರಲ್ಲಿ ಜೋರಾಯ್ತು ಫಿಫಾ ವಿಶ್ವಕಪ್ ಕ್ರೇಜ್! ರೆಸ್ಟೋರೆಂಟ್‌ಗಳಿಗೆ ರಾತ್ರಿ 3:30ರವರೆಗೆ ತೆರೆದಿರಲು ಅನುಮತಿ

Updated on: Jul 15, 2026 | 8:46 AM

ಬೆಂಗಳೂರಿನಲ್ಲಿ ಫಿಫಾ ವಿಶ್ವಕಪ್‌ ಜ್ವರ ಜೋರಾಗಿದ್ದು, ಫುಟ್ಬಾಲ್‌ ಪ್ರೇಮಿಗಳಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಫಿಫಾ ವಿಶ್ವಕಪ್‌ ಪಂದ್ಯಗಳನ್ನು ವೀಕ್ಷಿಸಲು ಅನುಕೂಲವಾಗುವಂತೆ ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳನ್ನು ರಾತ್ರಿ 3:30ರವರೆಗೆ ತೆರೆಯಲು ಅನುಮತಿ ನೀಡಲಾಗಿದೆ. ರಾಷ್ಟ್ರೀಯ ರೆಸ್ಟೋರೆಂಟ್ ಅಸೋಸಿಯೇಷನ್‌ನ ಮನವಿಗೆ ಸ್ಪಂದಿಸಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಬೆಂಗಳೂರು, ಜುಲೈ 15: ಬೆಂಗಳೂರಿನಲ್ಲಿ ಫಿಫಾ ವಿಶ್ವಕಪ್‌ ಜ್ವರ ಜೋರಾಗಿದ್ದು, ಫುಟ್ಬಾಲ್‌ ಪ್ರೇಮಿಗಳಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಫಿಫಾ ವಿಶ್ವಕಪ್‌ ಪಂದ್ಯಗಳನ್ನು ವೀಕ್ಷಿಸಲು ಅನುಕೂಲವಾಗುವಂತೆ ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳನ್ನು ರಾತ್ರಿ 3:30ರವರೆಗೆ ತೆರೆಯಲು ಅನುಮತಿ ನೀಡಲಾಗಿದೆ. ರಾಷ್ಟ್ರೀಯ ರೆಸ್ಟೋರೆಂಟ್ ಅಸೋಸಿಯೇಷನ್‌ನ ಮನವಿಗೆ ಸ್ಪಂದಿಸಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಇಂದು ನಡೆಯುವ ಸೆಮಿಫೈನಲ್ ಪಂದ್ಯ, ನಾಳೆ ಹಾಗೂ ಜುಲೈ 19ರಂದು ನಡೆಯುವ ಪಂದ್ಯಗಳಿಗೆ ಮಾತ್ರ ಈ ವಿಸ್ತೃತ ಸಮಯದ ಅನುಮತಿ ನೀಡಲಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ತಮ್ಮ ಎಕ್ಸ್ (X) ಖಾತೆಯಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಹಲವು ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ಈಗಾಗಲೇ ದೊಡ್ಡ ಸ್ಕ್ರೀನ್‌ಗಳನ್ನು ಅಳವಡಿಸಿ ಪಂದ್ಯ ವೀಕ್ಷಣೆಗೆ ವ್ಯವಸ್ಥೆ ಮಾಡಿಕೊಂಡಿವೆ. ಗ್ರಾಹಕರ ಸುರಕ್ಷತೆಗಾಗಿ ಹೆಚ್ಚುವರಿ ಬೌನ್ಸರ್‌ಗಳನ್ನು ನಿಯೋಜಿಸಲು ಹಾಗೂ ತಡರಾತ್ರಿ ಉಳಿಯುವ ಗ್ರಾಹಕರಿಗೆ ಕ್ಯಾಬ್‌ ವ್ಯವಸ್ಥೆ ಮಾಡಲು ನಿರ್ವಹಣಾ ಮಂಡಳಿಗೆ ಸೂಚಿಸಲಾಗಿದೆ. ಈ ಕ್ರಮದಿಂದ ಫುಟ್ಬಾಲ್‌ ಅಭಿಮಾನಿಗಳಿಗೆ ಪಂದ್ಯಗಳನ್ನು ಆನಂದಿಸಲು ಉತ್ತಮ ಅವಕಾಶ ದೊರೆತಂತಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More