ಹದಗೆಟ್ಟ ರಸ್ತೆಯಿಂದ ಮತ್ತೊಂದು ಅವಾಂತರ: ಸ್ಕಿಡ್​ ಆದ ಬೈಕ್; ತಂದೆ, ಮಕ್ಕಳು ಜಸ್ಟ್​​ ಮಿಸ್​​​

Edited By:

Updated on: Feb 25, 2026 | 6:38 PM

ಬೆಂಗಳೂರಿನ ಆನೇಕಲ್, ಚಂದಾಪುರದಲ್ಲಿ ಹದಗೆಟ್ಟ ರಸ್ತೆಯಿಂದ ಮತ್ತೊಂದು ಅವಘಡ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ ಕುಸಿದ ಸ್ಥಳದ ಬಳಿ, ದ್ವಿಚಕ್ರ ವಾಹನದಲ್ಲಿ ಮಕ್ಕಳನ್ನು ಶಾಲೆಗೆ ಬಿಡಲು ಹೋಗುತ್ತಿದ್ದ ತಂದೆ ಆಯತಪ್ಪಿ ಬಿದ್ದಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಸಿಟಿವಿಯಲ್ಲಿ ದೃಶ್ಯ ಸೆರೆ ಆಗಿದೆ.

ಆನೇಕಲ್, ಫೆಬ್ರವರಿ 25: ಬೆಂಗಳೂರಿನಲ್ಲಿ ರಸ್ತೆ ಹದಗೆಟ್ಟಿದ್ದರಿಂದ ಮತ್ತೊಂದು ಅವಾಂತರ ಸಂಭವಿಸಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಚಂದಾಪುರದ ಶೆಲ್ ಪೆಟ್ರೋಲ್ ಬಂಕ್​ ಬಳಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಸವಾರ ಆಯತಪ್ಪಿ ಬಿದ್ದಿರುವಂತಹ ಘಟನೆ ನಡೆದಿದೆ. ಬೈಕ್​​ನಲ್ಲಿ ಮಕ್ಕಳನ್ನು ಶಾಲೆಗೆ ಬಿಡಲು ತೆರಳುವಾಗ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ತಂದೆ, ಇಬ್ಬರು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಹಿನ್ನೆಲೆ ಮಕ್ಕಳು ಕಣ್ಣೀರಿಟ್ಟಿದ್ದಾರೆ. ಅಪಘಾತದ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆ ಆಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us